ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾಲುಜಾರಿ ಕಿತವಾಡ ಫಾಲ್ಸ್‌ಗೆ ಬಿದ್ದು ನಾಲ್ವರು ಯುವತಿಯರ ಸಾವು- ಓರ್ವಳ ಸ್ಥಿತಿ ಗಂಭೀರ
ಬೆಳಗಾವಿ: ಬೆಳಗಾವಿಯಿಂದ ಕಿತವಾಡ ಫಾಲ್ಸ್‌ಗೆ ಪ್ರವಾಸಕ್ಕೆ ಹೋಗಿದ್ದ ಯುವತಿಯರ ಪೈಕಿ ಐವರು ಫಾಲ್ಸ್‌ಗೆ ಬಿದ್ದು ನಾಲ್ವರು ಸಾವನ್ನಪ್ಪಿದರೆ ಓರ್ವಳ ಸ್ಥಿತಿ ಗಂಭೀರವಾಗಿದೆ. ಯುವತಿಯರ ಗುಂಪೊಂದು ಬೆಳಗಾವಿಯಿಂದ ಫಾಲ್ಸ್ ನೋಡುವ ನಿಟ್ಟಿನಲ್ಲಿ ಪ್ರವಾಸ ಕೈಗೊಂಡಿದ್ದರು. ಫಾಲ್ಸ್ ವೀಕ್ಷಣೆ ವೇಳೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಐವರು ಯುವತಿಯರು ಕಾಲು ಜಾರಿ ಫಾಲ್ಸ್‌ಗೆ ಬಿದ್ದಿದ್ದಾರೆ.
ಘಟನೆಯಲ್ಲಿ ಉಜ್ವಲ್ ನಗರ ಆಸೀಯಾ ಮುಜಾವರ್(17), ಅನಗೋಳದ ಕುದ್‌ಶೀಯಾ ಹಾಸ್‌ಂ ಪಟೇಲ್(20), ಝಟ್‌ಪಟ್ ಕಾಲೋನಿಯ ರುಕ್ಕಶಾರ್ ಭಿಸ್ತಿ(20), ತಸ್ಮಿಯಾ(20) ಸಾವನ್ನಪ್ಪಿದ್ದು, ಮತ್ತೋರ್ವಳ ಸ್ಥಿತಿ ಗಂಭೀರವಾಗಿದೆ.
ಕರ್ನಾಟಕ ಮಹಾರಾಷ್ಟ್ರ ಗಡಿಭಾಗದಲ್ಲಿ ಇರುವ ಕಿತವಾಡ ಫಾಲ್ಸ್‌ಗೆ 40 ಯುವತಿಯರು ಹೋಗಿದ್ದರು ಎಂದು ತಿಳಿದು ಬಂದಿದೆ.