ಶಾಲೆ ಮುಗಿಸಿ ಮನೆಗೆ ತೆರಳಲು ಬಸ ಗೆ ಕಾಯುತ್ತಿದ್ದ ವಿದ್ಯಾರ್ಥಿ ಮೇಲೆರೆಗಿದ ಕಾರು- 14 ವರುಷದ ಕಾರ್ತಿಕ್ ಸ್ಥಳದಲ್ಲೇ ಸಾವು
ಉಳ್ಳಾಲ:ಶಾಲೆ ಮುಗಿಸಿ ಮನೆಗೆ ತೆರಳು ಬಸ್ ಗೆ ಕಾಯುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಇಂದು ಸಂಜೆ ಉಳ್ಳಾಲದಲ್ಲಿ ಸಂಭವಿಸಿದೆ.
ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಮೃತ ಬಾಲಕ. ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆಬದಿಯಲ್ಲಿ ನಿಂತಿದ್ದ ಬಾಲಕನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.
ಕಾರು ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಬಾಲಕನಿಗೆ ಢಿಕ್ಕಿ ಹೊಡೆದ ಕಾರು ನಂತರ ಸಮೀಪದಲ್ಲೇ ಇದ್ದ ರಿಕ್ಷಾಗೂ ಢಿಕ್ಕಿ ಹೊಡೆದಿದ್ದಾನೆ. ಕಾರು ಮಾಲಕ ಟ್ರಯಲ್ ನೋಡಲು ಇನ್ನೋರ್ವ ಗೆಳೆಯನಿಗೆ ಕಾರು ನೀಡಿದ್ದ ಸಂದರ್ಭ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮಂಗಳೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ