ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಕಡು ಭ್ರಷ್ಟ ಕ್ಷೇತ್ರಶಿಕ್ಷಣಾಧಿಕಾರಿ(ಬಿ.ಇ.ಓ)
ಹರಿಹರ-ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರ ಶಿಕ್ಷಣಾಧಿಕಾರಿ ಸಿಬಿಎಸ್‌ಇ ಶಾಲೆಯ ಪರವಾನಿಗೆ ನವೀಕರಣಕ್ಕೆ ಹಣಕ್ಕೆ ಬೇಡಿಕೆ ಇಟ್ಟು, ತಮ್ಮ ಕಚೇರಿಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹರಿಹರ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 15 ಸಾವಿರ ರೂಪಾಯಿ ಲಂಚ ಪಡೆಯವಾಗ ಬಿಇಓ ಸಿದ್ದಪ್ಪ ಬಂಧಿಸಿದ್ದಾರೆ.
ಹರಿಹರ ನಗರದ ವಿದ್ಯಾವಾಹಿನಿ ಶಾಲೆಯ ಮುಖ್ಯಸ್ಥರಾಗಿದ್ದ ರಘುನಾಥ್ ಎಂಬವರಿಂದ ಲಂಚ ಪಡೆಯುತ್ತಿದ್ದಾಗ ಬಿಇಓ ಸಿದ್ದಪ್ಪ ಸಿಕ್ಕಿಬಿದ್ದಿದ್ದಾರೆ.
ಒಟ್ಟು 50 ಸಾವಿರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ. ಈ ಹಿಂದೆ ಮುಂಗಡವಾಗಿ 10 ಸಾವಿರ ರೂಪಾಯಿ ಲಂಚ ಪಡೆದಿದ್ದರು.