40 ಸಾವಿರ ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ
ಕಡು ಭ್ರಷ್ಟ ಲಂಚಬಾಕ ರಾಣೆಬೆನ್ನೂರು ಟೌನ್ ಪಿ.ಎಸ್.ಐ ಸುನೀಲ್ ತೇಲಿ
ರಾಣೆಬೆನ್ನೂರು-ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಶಹರ ಪೊಲೀಸ್ ಠಾಣೆ ಪಿಎಸ್‌ಐ ಮತ್ತು ಪೇದೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಶಹರ ಠಾಣೆ ಪಿಎಸ್‌ಐ ಸುನೀಲ್ ತೇಲಿ ಮತ್ತು ಇವರ ವಾಹನದ ಚಾಲಕ ಸಚಿನ್ ಲೋಕಾಯುಕ್ತ ಬಲೆಗೆ ಬಿದ್ದವರು.
ವ್ಯಕ್ತಿಯೊಬ್ಬರಿಂದ ಮನೆ ಬಾಡಿಗೆ ವಸೂಲಿ ಮಾಡಿಸಿ ಕೊಡುವ ವಿಚಾರಕ್ಕೆ 50 ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದರು. ವ್ಯಕ್ತಿಯೊಬ್ಬರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಮೇರೆಗೆ ದಾವಣಗೆರೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
40 ಸಾವಿರ ರೂ. ಲಂಚ ಪಡೆಯುತ್ತಿದ್ದ ಆರೋಪಿಗಳು ಸಮಯದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಸದ್ಯ ಆರೋಪಿ ಸ್ಥಾನದಲ್ಲಿರುವ ಪೊಲೀಸರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.