ತನ್ನ ಹೆಂಡತಿ ಜೊತೆ ಅನೈತಿಕ ಸಂಬಂಧ- ಅಣ್ಣನನ್ನೇ ಕೊಲೆ ಮಾಡಿದ ತಮ್ಮ
ಚಿಕ್ಕೋಡಿ-ಚೂರಿಯಿಂದ ಇರಿದು ಅಣ್ಣನನ್ನೇ ಬರ್ಬರವಾಗಿ ಇರಿದು ತಮ್ಮ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ
ನಡೆದಿದೆ.
ಅಕ್ಬರ್ ಶೇಖ್ ನನ್ನು ಅಜ್ಮದ್ ಶೇಖ್ ಎಂಬಾತ ಕೊಲೆ ಮಾಡಿದ್ದಾನೆ. ತನ್ನ ಹೆಂಡತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಅನುಮಾನದಲ್ಲಿ ಅಕ್ಬರ್ ಶೇಖ್‌ನನ್ನು ಸಹೋದರ ಅಜ್ಮದ್ ಶೇಖ್ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಬೈಕ್‌ನಲ್ಲಿ ತೆರಳುವಾಗ ಅಕ್ಬರ್ ಗೆ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಹಿಂಬಾಲಿಸಿಕೊಂಡು ಹೋಗಿರುವ ಅಜ್ಮದ್ ಶೇಖ್, ಅಪಘಾತ ಮಾಡಿ ಕೆಳಗೆ ಬೀಳಿಸಿದ್ದಾನೆ. ಬಳಿಕ ಚೂರಿಯಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ.