ಶಿಕ್ಷಕ ನಿಂದ ವಿದ್ಯಾರ್ಥಿ ಕೊಲೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಗೀತಾ ಸಾವು
ಗದಗ-ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿಕ್ಷಕ ನಿಂದ ವಿದ್ಯಾರ್ಥಿ ಕೊಲೆ ಪ್ರಕರಣದಲ್ಲಿ ಗಾಯಗೊಂಡಿದ್ದ ಶಿಕ್ಷಕಿ ಸಾವನ್ನಪ್ಪಿದ್ದಾರೆ.
ನರಗುಂದ ತಾಲೂಕಿನ ಹದಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿಯನ್ನು ಹತ್ಯೆಗೈದು ಇಬ್ಬರು ಶಿಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಶಿಕ್ಷಕಿ ಗೀತಾ ಚಿಕಿತ್ಸೆ ಫಲಿಸಿದೆ ಗುರುವಾರ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮೃತ ಬಾಲಕನ ತಾಯಿ, ಶಿಕ್ಷಕಿ ಗೀತಾ ಬಾರಕೇರ್ ಚಿಕಿತ್ಸೆ ಫಲಿಸದೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕೊಲೆ ಆರೋಪಿ ಹದಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಸಂಬಂಧವೇ ಕೊಲೆಗೆ ಕಾರಣ ಎನ್ನಲಾಗಿತ್ತು.