ದಾವಣಗೆರೆ-ಹೊನ್ನಾಳಿ ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ತುಂಗಾ ಕಾಲುವೆಯಲ್ಲಿ ಶವವಾಗಿ ಪತ್ತೆಯಾದ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಚಂದ್ರಶೇಖರ್ ಸಾವಿನ ಪ್ರಕರಣದ ತನಿಖೆ ಸಿಎಂ ಸೂಚನೆ ಬಳಿಕ ಚುರುಕುಗೊಂಡಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ.ಚಂದ್ರಶೇಖರ್ ಸಾವಿನ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಇದೀಗ ಚಂದ್ರು ಸಾವಿನ ಕುರಿತ ಡಯಾಟಮ್ ಪರೀಕ್ಷಾ ವರದಿ ಸಹಜ ಸಾವು ಎಂದು ಹೇಳುತ್ತಿದೆ.ಎಫ್‌ಎಸ್‌ಎಲ್, ಮರಣೋತ್ತರ ಪರೀಕ್ಷಾ ವರದಿಗೆ ಪೊಲೀಸರು ಕಾಯುತ್ತಿದ್ದಾರೆ.
ಶ್ವಾಸಕೋಶದಲ್ಲಿ ನೀರು ಇರುವುದನ್ನು ಈ ವರದಿ ಖಚಿತಪಡಿಸಿದೆ.ಈ ಹಿನ್ನೆಲೆ ಚಂದ್ರಶೇಖರ್ ಬದುಕಿದ್ದಾಗಲೇ ನಾಲೆಗೆ ಬಿದ್ದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ರೇಣುಕಾಚಾರ್ಯ ಚಂದ್ರುವಿಗೆ ಕೊಲೆ ಮಾಡಲಾಗಿದೆ ಎಂದು ಹೇಳಿದ್ದರು.ಚಂದ್ರ ಪೋಷಕರು ಕೂಡ ಕೊಲೆ ಆರೋಪ ಮಾಡಿದ್ದರು.ಅಪಘಾತ ಮತ್ತು ಆತ್ಮಹತ್ಯೆ ಬಗ್ಗೆ ಕೂಡ ಸಂಶಯ ಇತ್ತು.
ಈ ಹಿನ್ನೆಲೆ ಇಂದು ಬೆಳಿಗ್ಗೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯ ಪಿಎಸ್‌ಐ ನೇತೃತ್ವದ ನಾಲ್ವರ ತನಿಖಾ ತಂಡ ವಿನಯ್ ಗುರೂಜಿ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಆಶ್ರಮದ ಸಿಬ್ಬಂದಿ, ಆಶ್ರಮದ ಉಸ್ತುವಾರಿ ವಹಿಸಿರುವ ಭಕ್ತರಿಂದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.
ವಿಚಾರಣೆ ವೇಳೆ ವಿನಯ್ ಗುರೂಜಿ, ಚಂದ್ರು ತಡವಾಗಿ ಬಂದಿದ್ದರಿಂದ ಆತನ ಬಳಿ ಹೆಚ್ಚೆನೂ ನಾನು ಮಾತನಾಡಿಲ್ಲ. ತಡವಾಗಿ ಬಂದಿದ್ದಕ್ಕೆ ಇದು ಆಶ್ರಮಕ್ಕೆ ಭೇಟಿ ನೀಡುವ ಸಮಯವಾ ಎಂದು ಕೇಳಿದ್ದೇನೆ. ಬೇಗ ಹೋಗಿ, ಜಾಗೃತೆಯಿಂದ ಹೋಗಿ ಎಂದು ಇಬ್ಬರನ್ನು ಕಳುಹಿಸಿದ್ದೇನೆ. ಆಶ್ರಮದಲ್ಲಿ ನಡೆದಿರುವುದು ಇಷ್ಟು ಎಂದು ವಿನಯ್ ಗುರೂಜಿ ಹೇಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಆಶ್ರಮದ ಸಿಬ್ಬಂದಿ ಜೊತೆಯೂ ಮಾತನಾಡಿ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.