ಚಿತ್ರದುರ್ಗ: ಏಕಾಏಕಿ ನಾಯಿ ಅಡ್ಡ ಬಂದ ಪರಿಣಾಮ ಕಾರು ಅಪಘಾತಕ್ಕೀಡಾಗಿದ್ದು, ಇಬ್ಬರು ಮಹಿಳೆಯರು ಪ್ರಾಣ ಕಳೆದುಕೊಂಡ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕ ಬೆನ್ನೂರು ಬಳಿಯಲ್ಲಿ ನಡೆದಿದೆ.
ಮಹಾರಾಷ್ಟ್ರ ಮೂಲದ ಮಾನ್ಸಿ (40) ಹಾಗೂ ಉಜ್ವಲ್ ಬಾರ್ವಿ (44) ಮೃತಪಟ್ಟವರು ಎಂದು ಗುರುತಿಸಲಾಗಿದೆ. ತಿರುಪತಿಗೆ ತೆರಳಿ, ಮಹಾರಾಷ್ಟ್ರಕ್ಕೆ ವಾಪಸ್ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಕಾರಿ ಏಕಾಏಕಿ ನಾಯಿ ಅಡ್ಡ ಬಂದಿದ್ದು, ಇದರಿಂದಾಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಸಚ್ಚಿನ್ ಬಾರ್ವಿ ಎಂಬವರನ್ನು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ