ಬೆಂಗಳೂರು -ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ತಾನು ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬರಿಗೆ 2.5 ಕೋಟಿ ವಂಚನೆ ಮಾಡಿದ ಘಟನೆ ನಡೆದಿದೆ.
ಶ್ರೀನಿವಾಸ್ ಎಂಬಾತನೇ ಐಪಿಎಸ್ ಎಂದು ವಂಚಿಸಿದ ಆರೋಪಿ.
ತಾನು ಪ್ರೊಬೇಷನರಿ ಎಸ್ಪಿ ಎಂದು ಕೆಲ ಪೊಲೀಸ್ ಠಾಣೆಗಳಿಗೂ ಸಮವಸ್ತ್ರದಲ್ಲೆ ಹೋಗುತ್ತಿದ್ದನು ಎನ್ನಲಾಗಿದೆ. ಈ ವೇಳೆ ತಲಘಟ್ಟಪುರ ನಿವಾಸಿ ಆರೋಪಿಗೆ ಪರಿಚಯವಾಗಿದ್ದಾರೆ.
ತಾನು ಮೈಸೂರಿನಲ್ಲಿ ಪ್ರಸ್ತುತ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿಕೊಂಡು, ಮೈಸೂರಿನ ಲ್ಯಾಂಡ್ ವ್ಯವಹಾರದಲ್ಲಿ 450 ಕೋಟಿ ವ್ಯವಹಾರ ಇದೆ ಅದು ಡೀಲ್ ಆದ್ರೆ 250 ಕೋಟಿ ಸಿಗುತ್ತೆ ಎಂದು ನಂಬಿಸಿದ್ದಾನೆ. ನಂತರ ವ್ಯಕ್ತಿಯ ಬಳಿ ಹಣ ಬೇಕು ಎಂದು ಕೇಳಿ, ಹಂತ ಹಂತವಾಗಿ 2.5 ಕೋಟಿ ರೂಪಾಯಿ ಪಡೆದು ವಂಚನೆ ಮಾಡಿದ್ದಾನೆ.
ಘಟನೆ ಕುರಿತು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ನಕಲಿ ಐಪಿಎಸ್ ಅಧಿಕಾರಿ ಶ್ರೀನಿವಾಸ್ ವಿರುದ್ದ ಕೇಸ್ ದಾಖಲಾಗಿದೆ.