ಬಿ.ಇ. ಓ ಆಫೀಸ ಮ್ಯಾನೇಜರ್ ಆತ್ಮಹತ್ಯೆಗೆ ಶರಣು
ಮೂಡಿಗೇರಿ-ಕೆಲಸದ ಒತ್ತಡದಿಂದ ಶಿಕ್ಷಣ ಇಲಾಖೆಯ ಮ್ಯಾನೇಜರ್ ಒಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಸೋಮವಾರ ನಡೆದಿದೆ.
ಶಿಕ್ಷಣ ಇಲಾಖೆಯಲ್ಲಿ ಕೆಲಸದ ಒತ್ತಡ ಅಧಿಕವಾಗಿತ್ತು. ಡಿ ದರ್ಜೆ ನೌಕರರು ಕಡಿಮೆ ಇದ್ದಾರೆ. ಎಲ್ಲಾ ಕೆಲಸ ಸಮಯಕ್ಕೆ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಮನೆಯಲ್ಲಿ ನಿದ್ದೆ ಬರುತ್ತಿರಲಿಲ್ಲ ಎಂದು ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾರೆ.