ಕಲಬುರಗಿ: ಸೇಡಂನಲ್ಲಿ ಬಿಜೆಪಿ ಮುಖಂಡನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿರುವುದಾಗಿ ವರದಿಯಾಗಿದೆ.
ಕಲಬುರಗಿಯಲ್ಲಿ ಜಿಲ್ಲೆಯ ಸೇಡಂ ಪಟ್ಟಣದ ನಿವಾಸಿ, ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮುತ್ಯಾಲ (64) ಬರ್ಬರ ಹತ್ಯೆಗಿಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಮಲ್ಲಿಕಾರ್ಜುನ ಅವರ ಮರ್ಮಾಂಗಕ್ಕೆ ಚಾಕು ಇರಿದು, ಕುತ್ತಿಗೆ ಹಗ್ಗ ಬಿಗಿದು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.
ಮಲ್ಲಿಕಾರ್ಜುನ ಮುತ್ಯಾಲರ ಸೇಡಂನ ಎಲೆಕ್ಟ್ರಾನಿಕ್ ಅಂಗಡಿಯಲ್ಲೆ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.