ಹಾಡಹಗಲೇ ಕಾಲೇಜು ವಿದ್ಯಾರ್ಥಿಯನ್ನು ಬರ್ಬರವಾಗಿ ತಲವಾರನಿಂದ ಕೊಚ್ಚಿ ಕೊಲೆ
ಕಲಬುರ್ಗಿ: ಕಾಲೇಜು ವಿದ್ಯಾರ್ಥಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.
ಮಹಮ್ಮದ್ ಮುದ್ದಸೀರ್(19) ಕೊಲೆಯಾದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಮಂಗಳವಾರ ಸಂಜೆ ಅಮಿರ್ ಗುಲಶನ್ ಹಾಲ್ ಬಳಿ ಆರೋಪಿಗಳು ಮುದ್ದಸೀರ್ ಮೇಲೆ ತಲಾವಾರ್ ನಿಂದ ದಾಳಿ ನಡೆಸಿ ಪರಾರಿಯಾಗಿದ್ದರು.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುದ್ದಸೀರ್ ನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ತಡರಾತ್ರಿ ಮೃತಪಟ್ಟಿದ್ದಾನೆ.
ಈ ಬಗ್ಗೆ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.