ಬೈಕ್ ಅಪಘಾತ ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯೆ ಯುವಕ ಸಾವು
ಬೆಳ್ತಂಗಡಿ-ಬೈಕ್ ಸ್ಕಿಡ್ ಆಗಿ ಕಲ್ಲಿನಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರೀ ದೇವಸ್ಥಾನದ ಪಕ್ಕದ ತಿರುವು ರಸ್ತೆಯಲ್ಲಿ ನಡೆದಿದೆ.
ಅಣಿಯೂರಿನ ನೆರಿಯದ ಪ್ರದೀಪ ಗೌಡ (22) ಮೃತ ಯುವಕ.ಅಣಿಯೂರಿನ ನೋಣಯ್ಯ ಗೌಡ ಎಂಬವರ ಪುತ್ರರಾಗಿರುವ ಪ್ರದೀಪ ಅವರು ಸಂಬಂಧಿಗಳ ಮನೆಯಲ್ಲಿ ಇರುವ ಶುಭ ಕಾರ್ಯದ ನಿಮಿತ್ತ ವಸ್ತುವೊಂದನ್ನು ನೀಡಲು ತೆರಳುತ್ತಿದ್ದರು.ಈ ವೇಳೆ ಪ್ರದೀಪ್ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಎಡ ಭಾಗದಲ್ಲಿರುವ ಮನೆಯ ಗೇಟಿ ಬಳಿ ಇದ್ದ ಕಲ್ಲಿನ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತ ಆದ ತಕ್ಷಣ ಸ್ಥಳೀಯರು ಅವರನ್ನು ಉಜಿರೆ ಆಸ್ಪಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿಗೆ ಸಾಗಿಸುವ ಯತ್ನ ನಡೆಸಿದರಾದರೂ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.