ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ
ಶಿರಾಲಿ ಗ್ರಾಮಪಂಚಾಯತ್ ಸದಸ್ಯ ,ಹಿರಿಯ ಕಾಂಗ್ರೆಸ್ ಮುಖಂಡ ವೆಂಕಟೇಶ್ ಎನ್ ನಾಯ್ಕ ಆಯ್ಕೆ
ಭಟ್ಕಳ-ಭಟ್ಕಳ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಶಿರಾಲಿಯ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ , ಹಾಲಿ ಸದಸ್ಯ , ಹಿರಿಯ ಕಾಂಗ್ರೆಸ್ ಮುಖಂಡ ವೆಂಕಟೇಶ ನಾರಾಯಣ ಆಯ್ಕೆ ಮಾಡಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಭಟ್ಕಳ ತಾಲೂಕಿನ ಶಿರಾಲಿಯ ವೆಂಕಟೇಶ ನಾರಾಯಣ ನಾಯ್ಕ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೂಡಲೇ ಪ್ರಮಾಣ ವಚನ ಸ್ವೀಕರಿಸಿ ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಮಟ್ಟದ ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷವನ್ನು ಮತ್ತು ಸ್ಥಿರಗೊಳಿಸಿ ಮುಂದಿನ ವಿಧಾನಸಭಾ ಚುನಾವಣೆಯ ಪಕ್ಷ ಹೆಚ್ಚಿನ ಸಾಧನೆ ಮಾಡುವಂತೆ ಗಮನ್ಸ್ ಹರಿಸುವಂತೆ ಸೂಚನೆ ನೀಡಲಾಗಿದೆ.