ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣು
ಬಂಟ್ವಾಳ-ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿ ರೋಡಿನ ಅರ್ಬಿಗುಡ್ಡೆ ಎಂಬಲ್ಲಿ ನಡೆದಿದೆ.
ಅರ್ಬಿಗುಡ್ಡೆ ನಿವಾಸಿ ಶಿವಕುಮಾರ್(26) ಆತ್ಮಹತ್ಯೆ ಮಾಡಿಕೊಂಡ ಯುವಕ.ಈತ ಅವಿವಾಹಿತನಾಗಿದ್ದು ದೊಡ್ಡಮ್ಮನ ಮನೆಯಲ್ಲಿ ವಾಸವಾಗಿದ್ದ.
ನಿನ್ನೆ ದೊಡ್ಡಮ್ಮ ಮನೆಯಲ್ಲಿ ಇಲ್ಲದ ವೇಳೆ ಶಿವಕುಮಾರ್ ಓರ್ವನೇ ಮನೆಯಲ್ಲಿದ್ದ.ಈ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.