ರಾಸಾಯನಿಕ ತುಂಬಿದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 63 ರ ಅಂಕೋಲಾದಲ್ಲಿ ಬೆಂಕಿಗಾಹುತಿ
ಅಂಕೋಲಾ: ರಾಸಾಯನಿಕ ತುಂಬಿದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 63 ರ ಅಂಕೋಲಾ ತಾಲೂಕಿನ ವಜ್ರಳ್ಳಿ ಬಳಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಹುಬ್ಬಳ್ಳಿಯಿಂದ ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ರಾಸಾಯನಿಕ ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಇನ್ನೊಂದು ವಾಹನ ಢಿಕ್ಕಿ ಹೊಡೆದು ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ.
ಈ ಘಟನೆಯಲ್ಲಿ ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಬೆಂಕಿಯ ಕೆನ್ನಾಲೆಗೆ ಲಾರಿಯು ಸಂಪೂರ್ಣ ಸುಟ್ಟುಕರಕಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಪೊಲೀಸ್ ಸಿಬ್ಬಂದಿಗಳ ತಂಡ ಆಗಮಿಸಿ ಬೆಂಕಿ ನಂದಿಸುವ ಕಾರ್ಯಚರಣೆ ನಡೆಸಿದ್ದಾರೆ ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.