ಸುರತ್ಕಲ್ ಜಲೀಲ್ ಕೊಲೆ ಪ್ರಕರಣ ಮೂವರು ಆರೋಪಿಗಳನ್ನು ಬಂದಿಸಿದ ಪೊಲೀಸರು
ಮಂಗಳೂರು-ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 4ನೇ ಬ್ಲಾಕ್ ನೈತಂಗಡಿ ಬಳಿ ಶನಿವಾರ ರಾತ್ರಿ ನಡೆದ ಜಲೀಲ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದು, ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಮಾಡಿದ್ದೇವೆ. 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಇವರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು ಬೈಕ್ ನಲ್ಲಿ ತಂದು ಬಿಟ್ಟಿದ್ದ. ಗುರುತು ಪತ್ತೆ ಆಗೋವರೆಗೂ ಆರೋಪಿಗಳ ಮಾಹಿತಿ ಹೇಳಲು ಆಗಲ್ಲ. ಭಾನುವಾರ ರಾತ್ರಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ವಿಚಾರಣೆ ಮಾಡಲಾಗುತ್ತದೆ. ಕೊಲೆಗೆ ಕಾರಣ ಏನು ಅನ್ನುವುದನ್ನು ಪೂರ್ಣ ತನಿಖೆ ಬಳಿಕ ಹೇಳಲಾಗುವುದು ಎಂದರು.
ಇನ್ನು ಮೂವರಲ್ಲಿ ಇಬ್ಬರು ಈ ಹಿಂದೆ ಹಲವು ಪ್ರಕರಣಗಳ ಆರೋಪಿಗಳಾಗಿದ್ದು, 2021ರಲ್ಲಿ ನಡೆದ ಕೊಲೆ ಯತ್ನ ಕೇಸ್ ವೊಂದರಲ್ಲೂ ಅವರು ಇದ್ದರು. ಜಲೀಲ್ ಕೇಸ್ ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನ ವಶಕ್ಕೆ ಪಡೆದಿದ್ದೆವು ಆದರೆ 3 ಜನರನ್ನ ಮಾತ್ರ ಬಂಧನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.