ಪ್ರವಾಸದ ಶಾಲಾ ಬಸ್ ಪಲ್ಟಿ-ಶಿಕ್ಷಕಿ ಸಹಿತ ಹಲವು ವಿದ್ಯಾರ್ಥಿಗಳಿಗೆ ಗಾಯ
ಕಾರ್ಕಳ- ಶಾಲಾ ಪ್ರವಾಸದ ಬಸ್ ಪಲ್ಟಿಯಾದ ಘಟನೆ ಧರ್ಮಸ್ಥಳ—ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪದ ಪಾಜೆಗುಡ್ಡೆ ತಿರುವಿನಲ್ಲಿ ಸೋಮವಾರ ನಡೆದಿದೆ.
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢ ಶಾಲೆಗೆ ಸೇರಿದ ಖಾಸಗಿ ಬಸ್ ನಲ್ಲಿ ಮಕ್ಕಳು ಪ್ರವಾಸಕ್ಕೆಂದು ಕರಾವಳಿಗೆ ಆಗಮಿಸಿದ್ದರು. ಈ ವೇಳೆ ಪಾಜೆಗುಡ್ಡೆ ತಿರುವಿನಲ್ಲಿ ಬಸ್ ಚಾಲನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಘಟನೆಯಲ್ಲಿ ಮೂವರು ಶಿಕ್ಷಕಿಯರು ಸೇರಿದಂತೆ 20 ವಿದ್ಯಾರ್ಥಿಗಳಿಗೆ ಗಾಯವಾಗಿದೆ ಎಂದು ತಿಳಿದು ಬಂದಿದ್ದು, ಗಾಯಾಳುಗಳನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.