ಸುರತ್ಕಲ್- ಶಾಲೆಗೆಂದು ತಯಾರಾಗುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ದಾರುಣ ಘಟನೆ ಜ.10 ರ ಸೋಮವಾರ ಬೆಳಗ್ಗೆ ನಡೆದಿದೆ.
ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಮೃತ ಬಾಲಕ. ಬೆಳಗ್ಗೆ ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತತ್‌ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು. ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದು, ಬದುಕುಳಿಯುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ದುರದೃಷ್ಟವಶಾತ್ ಅದಾಗಲೇ ಕೊನೆಯುಸಿರೆಳೆದಿದ್ದ. ಅಬ್ದುಲ್ ರೆಹಮಾನ್ ದಂಪತಿ ಮೂವರು ಪುತ್ರರಲ್ಲಿ ಮೃತ ಹಸೀಮ್ ಎರಡನೆಯವನಾಗಿದ್ದಾನೆ.
ಮರಣೋತ್ತರ ಪರೀಕ್ಷೆ-ಗೊಂದಲ
ಮೃತ ಹಸೀಮ್ ಪಾರ್ಥಿವ ಶರೀರವನ್ನು ಮನೆಗೆ ಕೊಂಡೊಯ್ಯಲು ಪೋಷಕರು ಬಯಸಿದ್ದರಿಂದ ಮುಕ್ಕಾದ ಖಾಸಗಿ ಆಸ್ಪತ್ರೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಆಸ್ಪತ್ರೆಯಲ್ಲಿದ್ದ ವೈದ್ಯರು ಮರಣೋತ್ತರ ಪರೀಕ್ಷೆಗೆ ನಡೆಸದೆ ಬಿಟ್ಟುಕೊಡಲು ಒಪ್ಪರಲಿಲ್ಲ. ಈ ಬಗ್ಗೆ ಗೊಂದಲ ಉಂಟಾದ ಕಾರಣ ಮಾಜಿ ಶಾಸಕ ಮೊದಿನ್ ಬಾವಾ ಅವರು ಸ್ಥಳಕ್ಕೆ ಆಗಮಿಸಿ ಬಾಲಕನ ಅಂತ್ಯಕ್ರಿಯೆಗೆ ಬೇಕಾದ ಸಕಕ ವ್ಯವಸ್ಥೆ ಮಾಡಿದರು.