ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಭಟ್ಕಳದ ಮಾಜಿ ಶಾಸಕ ಜೆ.ಡಿ.ನಾಯ್ಕ ಆಯ್ಕೆ
ಕಾರವಾರ- ಕಾಂಗ್ರೆಸ್ ಪಕ್ಷದ ಉತ್ತರ ಕನ್ನಡ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಭಟ್ಕಳದ ಮಾಜಿ ಶಾಸಕ ಜೆ.ಡಿ.ನಾಯ್ಕ ಅವರನ್ನು ಆಯ್ಕೆ ಮಾಡಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ರಾಜ್ಯ ಅಧ್ಯಕ್ಷರಾದ ಎಂ.ಬಿ.ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆದೇಶದ ಮೇರೆಗೆ ಭಟ್ಕಳದ ಮಾಜಿ ಶಾಸಕ ಜೆ.ಡಿ ನಾಯ್ಕ ಅವರನ್ನು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ. ಪಕ್ಷವು ನೀಡಿದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಸ್ಥಳೀಯ ನಾಯಕರುಗಳು ಸಹಕಾರದೊಂದಿಗೆ ಪಕ್ಷವನ್ನು ಜಿಲ್ಲೆಯಲ್ಲಿ ಬಲಿಷ್ಠವಾಗಿ ಸಂಘಟಿಸಿ 2023ರ ವಿಧಾನಸಭೆ ಚುನಾವಣೆ ಪಕ್ಷ ಜಯಗಳಿಸುವಂತೆ ಕಾರ್ಯಪ್ರವರ್ತರಾಗುವಂತೆ ತಿಳಿಸಿದ್ದಾರೆ.