ಲಾಡ್ಜ ಅಲ್ಲಿ ಅನೈತಿಕ ವೇಶ್ಯಾವಾಟಿಕೆ ಚಟುವಟಿಕೆ- ಮೂವರು ಮಹಿಳೆಯರ ಬಂಧನ
ಮಣಿಪಾಲ-ಉಡುಪಿ ಜಿಲ್ಲೆಯ ಮಣಿಪಾಲದ ಹೆರ್ಗ ಗ್ರಾಮದ ಸಮೀಪ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ವೊಂದಕ್ಕೆ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆ ಸೇರಿ ಮೂವರು ವಶಕ್ಕೆ ಪಡೆದ ಘಟನೆ ನಡೆದಿದೆ.
ಲಾಡ್ಜ್ನ ಮ್ಯಾನೇಜರ್ ಸಂಪತ್’ಕುಮಾರ್ ಮತ್ತು ರೂಮ್’ಬಾಯ್ ದಿನೇಶ್ ಲಾಡ್ಜ್ನಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಆರೋಪ ಹೊತ್ತಿದ್ದಾರೆ.
ಇನ್ನು ಎರಡು ಪ್ರತ್ಯೇಕ ಕೊಠಡಿಗಳಲ್ಲಿದ್ದ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳ ಬಳಿ ಇದ್ದ ಬೆಲೆಬಾಳುವ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.