ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ
ಆಶಿತ್ ಕುಮಾರ್
ಮಂಗಳೂರು -ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉದ್ಯಮಿಯೊಬ್ಬರು ಗುರುಪುರದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರು ಭಾರತೀಯ ಜೇಸಿಸ್‌ನ ಹಲವು ಹುದ್ದೆಗಳನ್ನು ನಿರ್ವಹಿಸಿದ್ದ ಉದ್ಯಮಿ ಆಶಿತ್ ಕುಮಾರ್ (51) ಎಂದು ತಿಳಿಯಲಾಗಿದೆ.
ಅವರು ಮೂಲತಃ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಟ ಗ್ರಾಮದ ಕೇಳದ ಪೇಟೆಯವ ರಾಗಿದ್ದ ಅವರು ಉದ್ಯಮಿಯಾಗಿದ್ದು ಮೂಡುಬಿದಿರೆಯಲ್ಲಿ ಮಹಾವೀರ ಎಲೆಕ್ಟ್ರಾ ನಿಕ್ಸ್ ಸಂಸ್ಥೆಯನ್ನು ಸ್ಥಾಪಿಸಿ ಮುನ್ನಡೆಸಿದ್ದರು. ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಬಳಿಕ ಉದ್ಯಮವನ್ನು ಮುಚ್ಚಿ ಮಂಗಳೂರಿನಲ್ಲಿ ಖಾಸಗಿ ಇನ್ಸೂರೆನ್ಸ್ ಕಂಪನಿಯಲ್ಲಿ ಉದ್ಯೋಗಿಯಾಗಿ ಸೇರ್ಪಡೆ ಗೊಂಡು ಮಂಗಳೂರಿನಲ್ಲಿ ನೆಲೆಸಿದ್ದರು.
ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು, ಮೂಡುಬಿದಿರೆ ತ್ರಿಭುವನ್ ಜೇಸಿಐ ಅಧ್ಯಕ್ಷರಾಗಿ, ವಲಯ 15ರ ವಲಯಾಧಿಕಾರಿ, ವಲಯಾಧ್ಯಕ್ಷರಾಗಿ ನಾನಾ ಹುದ್ದೆಗಳನ್ನು ನಿರ್ವಹಿಸಿದ್ದರು. ಕೇಳದಪೇಟೆ ಬಸದಿಯ ಜೀರ್ಣೋದ್ಧಾರದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಆರ್ಥಿಕ ಮುಗ್ಗಟ್ಟು ಆತ್ಮಹತ್ಯೆಗೆ ಕಾರಣವೆನ್ನಲಾಗಿದೆ. ಅವರಿಗೆ ಪತ್ನಿ, ಪುತ್ರ ಇದ್ದಾರೆ.
ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ