ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ – ರುಕಿಯಾ ಎಂಬ ಮಹಿಳೆ ಅರೆಸ್ಟ್, 4 ಯುವತಿಯರ ರಕ್ಷಣೆ
ಮಂಗಳೂರು-ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದ ಪಂಡಿತ್ ಹೌಸ್ ಬಳಿ ವೇಶ್ಯಾವಾಟಿಕೆ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಮಹಿಳೆಯೊಬ್ಬರನ್ನು ಬಂಧಿಸಿದ ಘಟನೆ ನಡೆದಿದೆ.
ಬಂಧಿತಳು ಬೊಳಂತೂರು ಗ್ರಾಮದ ವಿಟ್ಲಕೋಡಿ ನಿವಾಸಿ ರುಕಿಯಾ (50) ಎಂದು ತಿಳಿದುಬಂದಿದ್ದು, ಈಕೆ ವಿಜೇತ ನಗರದ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಳು.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.