ಭಟ್ಕಳ-ನೂತನ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಅಂತೆಯೇ ಜಿಲ್ಲೆಯ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳ ವೈದ್ಯರಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಖಾತೆಯನ್ನು ನೀಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಭಟ್ಕಳ ಶಾಸಕ ಮಂಕಾಳ ವೈದ್ಯ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಈ ಹಿಂದೆ 2013 ರಲ್ಲಿ ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಬ್ಯರ್ಥಿಯಾಗಿ ಗೆದ್ದು ಬಂದು 2014 ರಲ್ಲಿ ಮಂಕಾಳ ವೈದ್ಯ ಅವರು ಕಾಂಗ್ರೆಸ್ ಪಕ್ಷ ಸೇರಿದ್ದರು.