ಕಡು ಭ್ರಷ್ಟ ಲಂಚಬಾಕ ಪಿ.ಡಿ.ಓ ಮಹೇಶ 20000 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ
ಕಡಬ – ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಪಿಡಿಓ ಒಬ್ಬನನ್ನು
ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ತೆಗೆದುಕೊಂಡಿದ್ದಾರೆ.
ಲಂಚ ಸ್ವೀಕರಿಸುತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಪಿಡಿಓ ಬಿದ್ದಿದ್ದಾನೆ ಎಂದು ತಿಳಿದು ಬಂದಿದೆ.ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಪಿಡಿಓ ಮಹೇಶ್ 20 ಸಾವಿರ ರೂಪಾಯಿ ಲಂಚ ಸ್ವೀಕರಿಸುತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಭೂಮಿ ಖಾತಾ ಮಾಡಿಕೊಡಲು 20 ಸಾವಿರ ರೂಪಾಯಿ ಬೇಡಿಕೆಯಿಟ್ಟ ಆರೋಪ ಮೇರೆಗೆ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ ಪಿ ಸೈಮನ್, ಡಿ ವೈ ಎಸ್ ಪಿ ಚಲುವರಾಜ್ ನೇತೃತ್ವದಲ್ಲಿ ನಡೆದ ದಾಳಿ ನಡೆಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.