ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ತನಿಖೆ ನಡೆಸಿದ ಸಿ.ಬಿ.ಐ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಮರು ತನಿಖೆ ನಡೆಸಿ- ಮಾಹಿತಿ ಹಕ್ಕು ಕಾರ್ಯಕರ್ತರ ಸಂಘದ ರಾಜ್ಯ ಅಧ್ಯಕ್ಷ ಕುಣಿಗಲ್ ರಮೇಶ
ಭಟ್ಕಳ- ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಈಗಾಗಲೇ ತೀರ್ಪು ನೀಡಿದ್ದು, ಆರೋಪಿ ಸಂತೋಷ್ ಅವರನ್ನು ನಿರ್ದೋಷಿ ಎಂದು ಘೋಷಿಸಿದೆ. ಇದರ ಬೆನ್ನಲ್ಲೇ ನೈಜ ಆರೋಪಿಗಳ ಬಂಧನಕ್ಕೆ ಆಗ್ರಹ ಕೇಳಿಬಂದಿದೆ.
ಈ ವಿಷಯಕ್ಕೆ ಸಂಬಂದಿಸಿದಂತೆ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ರಾಜ್ಯ ಅಧ್ಯಕ್ಷ ರಮೇಶ್ ಕುಣಿಗಲ್ ಅವರು ಮಾತನಾಡಿ ಸೌಜನ್ಯ ಪ್ರಕರಣ ತನಿಖೆ ನಡೆಸಿದ ಅಧಿಕಾರಿಗಳು ನಿಜವಾದ ಆರೋಪಿಗಳ ಸುಳಿವು ಅವರಿಗೆ ಇದ್ದರು ಕೂಡ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸಂಪೂರ್ಣ ವಿಫಲರಾಗಿ ಒಬ್ಬ ನಿರಪರಾಧಿ ಕಂಡು ಹಿಡಿಯಲು 11 ವರುಷ ತೆಗೆದುಕೊಂಡು ಕಾಲಹರಣ ಮಾಡಿದ್ದಾರೆ ಅದ ಕಾರಣ ಸಿ.ಬಿ.ಐ ಅಧಿಕಾರಿಗಳ ಮೇಲೆ ಕರ್ನಾಟಕ ಸರ್ಕಾರ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಈ ಮೂಲಕ ಪ್ರಕರಣ ಮರು ತನಿಖೆ ನಡೆಸಿ ಸೌಜನ್ಯ ಕುಟುಂಬಕ್ಕೆ ನ್ಯಾಯ ಒಡಗಿಸಬೇಕು ಎಂದು ಕರ್ನಾಟಕ ಸರಕಾರವನ್ನು ಆಗ್ರಹಿಸಿದ್ದಾರೆ.
ಸೌಜನ್ಯಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಕರ್ನಾಟಕ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ಜುಲೈ 28 ರಂದು ಬೆಂಗಳೂರಲ್ಲಿ ಧರಣಿಗೆ ಕರೆ ನೀಡಿವೆ. ಈ ನಡುವಲ್ಲೇ ಸೌಜನ್ಯ ಪೋಷಕರು, ಹೋರಾಟಗಾರ ಮಹೇಶ್ ತಿಮ್ಮರೋಡಿ ಅವರ ಜೊತೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದಲ್ಲಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿ ಪುತ್ರಿ ಸೌಜನ್ಯ ಉಜಿರೆ ಎಸ್‌ಡಿಎಂ ಕಾಲೇಜಿನಿಂದ ಮನೆಗೆ ವಾಪಾಸಾಗುವ ವೇಳೆಯಲ್ಲಿ ನಾಪತ್ತೆಯಾಗಿದ್ದಳು. ನಂತರದ ಎರಡು ದಿನಗಳ ಬಳಿ ಸೌಜನ್ಯ ಮೃತದೇಹ ಪತ್ತೆಯಾಗಿದ್ದು, ಆಕೆಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 11 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಸಿಬಿಐ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಮತ್ತೆ ಸೌಜನ್ಯ ಪ್ರಕರಣ ಸದ್ದು ಮಾಡುತ್ತಿದ್ದು, ಹೋರಾಟ ನಡೆಯುತ್ತಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜುಲೈ 28ರಂದು 60ಕ್ಕೂ ಅಧಿಕ ಸಂಘಟನೆಗಳು ಈ ಧರಣಿಗೆ ಬೆಂಬಲ ವ್ಯಕ್ತಪಡಿಸಿವೆ. ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಸೌಜನ್ಯಳಿಗೆ ನ್ಯಾಯ ಸಿಗಬೇಕು. ಸೌಜನ್ಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಿಶೇಷ ನ್ಯಾಯಾಲಯ ತನಿಖೆಗೆ ಆದೇಶಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ರಾಜಕೀಯ ಪ್ರಭಾವಕ್ಕೆ ಒಳಗಾಗದೇ ತನಿಖೆಗೆ ಮಾಡಿ ನ್ಯಾಯ ಒದಗಿಸುವಂತೆ ಒತ್ತಾಯಿಸಲಾಗಿದೆ. ಅಪರಾಧಿಗಳನ್ನು ಪತ್ತೆ ಮಾಡಿ ಶಿಕ್ಷಿಸುವುದು ಸರಕಾರದ ಆದ್ಯ ಕರ್ತವ್ಯ. ಈ ಕರ್ತವ್ಯ ನಿಭಾಯಿಸದೆ ಹೋದರೆ ಸಮಾಜದಲ್ಲಿ ಅರಾಜಕತೆ ಸೃಷ್ಟಿಯಾಗಲಿದೆ. ನಮ್ಮ ಮನವಿಯನ್ನು ಪುರಸ್ಕರಿಸಿ ಕೂಡಲೇ ತನಿಖೆಗೆ ಆದೇಶಿಸಬೇಕು ಎಂದು ಹಿರಿಯ ವಕೀಲರಾದ ಅಖಿಲ ವಿದ್ಯಾಸಂದ್ರ ಆಗ್ರಹಿಸಿದ್ದಾರೆ.