ಆಗಸ್ಟ್ 27 ರಂದು ದ.ಕ ಮತ್ತು ಉಡುಪಿ ಜಿಲ್ಲಾ ಬಿಜೆಪಿಯಿಂದ ಸೌಜನ್ಯ ಪರ ಬ್ರಹತ ಪ್ರತಿಭಟನೆ
ಮಂಗಳೂರು: ಸೌಜನ್ಯ ಪರ ಹೋರಾಟಕ್ಕೆ ಬಿಜೆಪಿ ಧುಮುಕಿದೆ, ಆ.27 ರಂದು ಬಿಜೆಪಿ ಯಿಂದ ದ.ಕ,ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಶಾಸಕರನೊಳಗೊಂಡು ಬೃಹತ್ ಪ್ರತಿಭಟನೆ ನಡೆಸುವುದಾಗಿ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಹಿತಿ ನೀಡಿದ್ದಾರೆ.
ಹೋರಾಟದಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ಪ್ರಮುಖರು ಭಾಗಿಯಾಗಲಿದ್ದಾರೆ. ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಎಸ್ ಡಿ ಎಂ ವಿದ್ಯಾರ್ಥಿನಿ ಸೌಜನ್ಯ ಪ್ರಕರಣ ಪೊಲೀಸ್ ತನಿಖೆ ಆಗಿದೆ, ಸಿಐಡಿ ಬಳಿಕ ಹೋರಾಟ ನಡೆದು ಸಿಬಿಐ ತನಿಖೆ ಕೂಡ ಆಗಿದೆ. ಕೊನೆಗೆ ಸಿಬಿಐ ಬಂಧಿತ ವ್ಯಕ್ತಿ ಆರೋಪಿ ಅಲ್ಲ ಅಂತ ಹೇಳಿದೆ. ಆವತ್ತು ಕೂಡ ಬಿಜೆಪಿ ಈ ವಿಚಾರದಲ್ಲಿ ಹೋರಾಟ ಮಾಡಿತ್ತು,ಇದೀಗ ಮತ್ತೆ ಬಿಜೆಪಿ ಇಡೀ ಪ್ರಕರಣದ ಮರು ತನಿಖೆಗೆ ಆಗ್ರಹಿಸುತ್ತದೆ.
ಘಟನೆಯ ಬಳಿಕದ ಹೋರಾಟಗಳು, ಕುಟುಂಬದ ಆಗ್ರಹಗಳ ತನಿಖೆ ಆಗಬೇಕು, ಹಂತಕರ ಪತ್ತೆ ಮೂಲಕ ಕುಟುಂಬಕ್ಕೆ ನ್ಯಾಯ ಸಿಗಬೇಕು. ಬಿಜೆಪಿ ಪ್ರಕರಣದ ಮರು ತನಿಖೆಗೆ ಸಿಎಂಗೆ ಒತ್ತಾಯ ಮಾಡಲಿದೆ, ಅ. 27ರಂದು ಬಿಜೆಪಿ ಬೃಹತ್ ಹೋರಾಟ ನಡೆಸಲಿದೆ. ಆ ಬಳಿಕ ಸಿಎಂ ಮತ್ತು ರಾಜ್ಯಪಾಲರಿಗೆ ಮನವಿ ಕೊಡಲಿದ್ದೇವೆ.
ಅ.27 ರಂದು ದ.ಕ ಮತ್ತು ಉಡುಪಿ ಜಿಲ್ಲೆಯ ಕಾರ್ಯಕರ್ತರ ಸೇರಿಸಿ ಬೃಹತ್ ಹೋರಾಟ ಮಾಡಲಿದ್ದು, ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗ ಬೃಹತ್ ಹೋರಾಟ ನಡೆಯಲಿದೆ. ಎರಡೂ ಜಿಲ್ಲೆಗಳ ಶಾಸಕರು, ನಾಯಕರು ಭಾಗಿಯಾಗಲಿದ್ದಾರೆ. ಪ್ರತಿಭಟನೆಯ ಮರು ದಿನ ಶಾಸಕರ ನಿಯೋಗ ಸಿಎಂ ಭೇಟಿಯಾಗಲಿದೆ.
ಸೌಜನ್ಯ ಕೇಸ್ ನಲ್ಲಿ ಸಿಬಿಐಗೆ ಹೋದರೂ ಆರೋಪಿಗಳು ಯಾರು ಅನ್ನೋದು ಆಗಿಲ್ಲ. ಇದರಲ್ಲಿ ಯಾರನ್ನೂ ಟಾರ್ಗೆಟ್ ಮಾಡುವ ವಿಷಯ ಇಲ್ಲ. ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಅನ್ನೋದು ನಮ್ಮ ಉದ್ದೇಶ. ಬೇರೆ ಬೇರೆ ರೀತಿಯ ಹೋರಾಟಗಾರರು ಬೇರೆ ಹೋರಾಟ ಮಾಡಬಹುದು ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.