ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣ-ಇನ್ನೋರ್ವ ಪ್ರಮುಖ ಆರೋಪಿ ಹಾಲಶ್ರೀಯ ಸಿಸಿಬಿ ಪೊಲೀಸರಿಂದ ಬಂಧನ
ಕುಂದಾಪುರ,-ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಪ್ರಮುಖ ಆರೋಪಿ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು ಒಡಿಶಾದ ಕಟಕ್ನಲ್ಲಿ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧ್ಗಯಾಗೆ ತೆರಳುತ್ತಿದ್ದ ವೇಳೆ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಹಿಡಿದಿದ್ದಾರೆ. ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಇಂದು ರಾತ್ರಿ ಬೆಂಗಳೂರಿಗೆ ಕರೆತರಲಿದ್ದಾರೆ.