ಭಟ್ಕಳದ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ತು ಮತ್ತು ಭಜರಂಗದಳ ನೇತೃತ್ವದಲ್ಲಿ ಬ್ರಹತ ಶೌರ್ಯ ಜಾಗರಣ ರಥಯಾತ್ರೆ
ಭಟ್ಕಳ- ಭಾರತದ ಮೇಲೆ ಆಕ್ರಮಣ ನಡೆದಾಗಲೂ ಹಿಂದೂ ಧರ್ಮ ಉಳಿದಿದೆ. ಹಿಂದೂ ಧರ್ಮದ್ದು ಸೋಲಿನ ಇತಿಹಾಸವಲ್ಲ ಪರಾಕ್ರಮದ ಇತಿಹಾಸ ಎನ್ನುವುದನ್ನು ಸಮಾಜಕ್ಕೆ ತಿಳಿಸುವುದು ಅಗ್ಯವಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ್ ಮುಖಂಡರು ಉಪಾಧ್ಯಕ್ಷ ಹೇಳಿದರು.ಭಟ್ಕಳ ಪಟ್ಟಣದಲ್ಲಿ ವಿಶ್ವ ಹಿಂದೂಪರಿಷತ್-ಬಜರಂಗದಳದಿಂದ ಹಮ್ಮಿಕೊಂಡ ಶೌರ್ಯ ಜಾಗರಣ ರಥಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಹಿಂದೂ ಧರ್ಮದ ಮೇಲೆ ನೂರಾರು ವರ್ಷಗಳ ಕಾಲ ಪರಕೀಯರ ದಾಳಿ ನಡೆದಾಗಲೂ ಧರ್ಮವೂ ಈ ನೆಲದಲ್ಲಿ ನೆಲೆಯೂರಿದೆ. ಹಿಂದೂ ಧರ್ಮದ ರಕ್ಷಣೆಗಾಗಿ ಅನೇಕ ಮಹನೀಯರ ತ್ಯಾಗ ಮತ್ತು ಬಲಿದಾನವಿದೆ. ಇದನ್ನೂ ಇಂದಿನ ಯುವ ಪೀಳಿಗೆಗೆ ತಿಳಿಸುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ. ಇಸ್ಲಾಂ, ಕ್ರೈಸ್ತರ ದಾಳಿಯನ್ನು ಹಿರಿಯರು ಶೌರ್ಯ ಮತ್ತು ತ್ಯಾಗದ ಮೂಲಕ ಎದುರಿಸಿದ್ದಾರೆ. ಈಗ ಹಿಂದೂ ಸಮಾಜದ ಯುವಕರನ್ನು ಬಡಿದೆಬ್ಬಿಸಲು ಶೌರ್ಯ ಜಾಗರಣ ರಥ ಯಾತ್ರೆ ದೇಶಾದ್ಯಂತ ನಡೆಯುತ್ತಿದೆ. ಜಗತ್ತಿನಲ್ಲಿ ಹಿಂದೂಗಳಿಗೆ ಉಳಿದಿರುವುದು ಭಾರತ ಮಾತ್ರ.
ದೇಶ ಹಿಂದೂಸ್ತಾನವಾಗಬೇಕು. ವಿಹಿಂಪ ಸ್ಥಾಪನೆಯಾಗಿ ಅರವತ್ತು ವರ್ಷ ಹಾಗೂ ಶ್ರೀ ರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭವ್ಯ ಶ್ರೀ ರಾಮ ಮಂದಿರ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಶೌರ್ಯ ಜಾಗರಣ ರಥಯಾತ್ರೆ ನಡೆಯುತ್ತಿದೆ ಅ.12ರಂದು ಶಿರಸಿಯಲ್ಲಿ ಸಂಪನ್ನಗೊಳ್ಳಲಿದೆ ಎಂದರು.
ಭಟ್ಕಳದ ಸರ್ಕಲ್ ನಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾಉಪಾಧ್ಯಕ್ಷ ಶಂಕರ್ ಶೆಟ್ಟಿ ಮತ್ತು ಹಿಂದೂ ಮುಖಂಡ ಗೋವಿಂದ ನಾಯ್ಕ ಶೌರ್ಯ ಜಾಗರಣ ರಥಯಾತ್ರೆಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿ, ಮಾತನಾಡಿ ನಾವೆಲ್ಲರೂ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡಬೇಕಾಗಿದೆ. ನಾವೆಲ್ಲರೂ ಒಂದೇ ಎನ್ನುವ ಮನೋಭಾವ ನಮ್ಮಲ್ಲಿ ಮೂಡಬೇಕಾಗಿದೆ ಎಂದರು.
ಭಟ್ಕಳ ಪಟ್ಟಣದಲ್ಲಿ ಶೌರ್ಯ ಜಾಗರಣ ರಥಯಾತ್ರೆಗೆ ಮಾಜಿ ಶಾಸಕ ಸುನೀಲ್ ನಾಯ್ಕ, ನಾಮಧಾರಿ ಸಮಾಜದ ಅಧ್ಯಕ್ಷ ಕೃಷ್ಣ ನಾಯ್ಕ ಆಸರಕೆರಿ, ಹಿಂದೂ ಮುಖಂಡ ಗೋವಿಂದ ನಾಯ್ಕ ಹನುಮಾನ್ ನಗರ, ಶ್ರೀಕಾಂತ ನಾಯ್ಕ್, ಸಾವಿರಾರು ಹಿಂದೂ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಥ್ ನೀಡಿದರು.
ನಗರದ ಬೀದಿಯಲ್ಲಿ ಡೊಳ್ಳು ಕುಣಿತ, ಚಂಡೆ ವಾದ್ಯ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಮುರುಡೇಶ್ವರದ ಒಲಗ ಮಂಟಪದಿಂದ ಆರಂಭಗೊಂಡ ರಥಯಾತ್ರೆ ಶಿರಾಲಿ, ಮಾರ್ಗವಾಗಿ ಭಟ್ಟಳಕ್ ತಲುಪಿತು.