ವಿಶ್ವ ಮೀನುಗಾರರ ದಿನಾಚರಣೆಯಲ್ಲಿ ಮೀನಿನ ಉತ್ಪನ್ನಗಳ ಪ್ರದರ್ಶನದಲ್ಲಿ ಪಾಲ್ಗೊಂಡ ಮಲ್ಪೆ ಮೀನುಗಾರರ ಉತ್ಪಾದಕರ ಕಂಪನಿ.
ಬೆಂಗಳೂರು : ಇಲ್ಲಿನ ವಿಧಾನಸೌಧದ ಬೆಂಕ್ವೆಟ್ ಹಾಲ್ ನಲ್ಲಿ ನಡೆದ ವಿಶ್ವ ಮೀನುಗಾರರ ದಿನಾಚರಣೆಯ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರ, ಜಲಾನಯನ ಇಲಾಖೆ, ಮೀನುಗಾರಿಕಾ ಇಲಾಖೆ, ಹಾಗೂ ಸ್ಕೊಡವೇಸ ಸಂಸ್ಥೆಯ ಸಹಯೋಗದಲ್ಲಿ ರಚಿತವಾದ ಮಲ್ಪೆ ಮೀನುಗಾರರ ಉತ್ಪಾದಕ ಕಂಪನಿಯು ತನ್ನ ಕಂಪನಿಯಿಂದ ತಯಾರಿಸಿದ ಉತ್ಪನ್ನಗಳ ಪ್ರದರ್ಶನದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಹಾಗೂ ಇಲಾಖೆಯ ಅಧಿಕಾರಿಗಳು ಮಲ್ಪೆ ಮೀನುಗಾರರ ಉತ್ಪಾದಕರ ಕಂಪನಿಯ ಮಳಿಗೆಯನ್ನು ವೀಕ್ಷಿಸಿದರು. ಕಂಪನಿಯ ಮುಖ್ಯ ಕಾರ್ಯ ನಿರ್ವಾಹಕ ವಿಷ್ಣುಪ್ರಸಾದ ಕಂಪನಿಯ ಉತ್ಪನ್ನಗಳ ಮಾಹಿತಿ ನೀಡಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ,ಇಲಾಖಾಅಧಿಕಾರಿಗಳು ಮಲ್ಪೆ ಮೀನುಗಾರರ ಕಂಪನಿಯ ಉತ್ಪನ್ನಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಕಂಪನಿಯ ನಿರ್ದೇಶಕರಾದ ಕಂಪನಿಯ ಅಧ್ಯಕ್ಷೆ ವನಜಾ ಪುತ್ರನ್, ನಿರ್ದೇಶಕಿ ನಿರ್ಮಲ ಸಾಲಿಯಾನ್ ಉಪಸ್ಥಿತರಿದ್ದರು.