ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಕಾರವಾರದ ಮಾಜಿ ಶಾಸಕಿ ಶ್ರೀಮತಿ ರೂಪಾಲಿ ಸಂತೋಷ್ ನಾಯ್ಕ ಆಯ್ಕೆ
ಭಟ್ಕಳ-ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಕಾರವಾರದ ಮಾಜಿ ಶಾಸಕಿ ಶ್ರೀಮತಿ ರೂಪಾಲಿ ಸಂತೋಷ್ ನಾಯ್ಕ ಆಯ್ಕೆ ಆಗಿದ್ದಾರೆ. ಬಿಜೆಬಿ ರಾಜ್ಯ ಕಚೇರಿಯಿಂದ ಇಂದು ಹೊರಡಿಸಿದ ರಾಜ್ಯ ಮಟ್ಟದ ಪದಾಧಿಕಾರಿಗಳ ಹುದ್ದೆಗಳ ಪತ್ರಿಕಾ ಪ್ರಕಟಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಿಂದ ಕಾರವಾರ ದ ಮಾಜಿ ಶಾಸಕಿ ಶ್ರೀಮತಿ ರೂಪಾಲಿ ನಾಯ್ಕ ಅವರ ಹೆಸರು ಇದೆ. ರೂಪಾಲಿ ನಾಯ್ಕ ಅವರನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಗಿ ಆಯ್ಕೆ ಮಾಡಲಾಗಿದೆ.