ಬಿಜೆಪಿ ಮುಖಂಡ ಮಾಜಿ ಸಚಿವ ಶಿವಾನಂದ ನಾಯ್ಕ ಅವರ ಮನೆಗೆ ಬೇಟಿ ನೀಡಿದ ಸಚಿವ ಮಾಂಕಳ ವೈದ್ಯ
ಭಟ್ಕಳ- ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರು ಇಂದು ಬಿಜೆಪಿ ಮುಖಂಡ ಮಾಜಿ ಸಚಿವ ಶಿವಾನಂದ ನಾಯ್ಕ ಅವರ ಮನೆಗೆ ಭೇಟಿ ನೀಡಿ ಅವರ ಯೋಗ ಕ್ಷೇಮ ವಿಚಾರಿಸಿದರು. ಕೆಲವು ವರುಷದ ಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಿಜೆಪಿ ಮುಖಂಡ, ಮಾಜಿ ಸಚಿವ ಶಿವಾನಂದ ನಾಯ್ಕ್ ಅವರು ರಾಜಕೀಯ ಚಟುವಟಿಕೆಗಳಿಂದ ಸ್ವಲ್ಪ ದೂರ ಉಳಿದು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರು ಆರೋಗ್ಯ ವಿಚಾರಿಸುವ ನೆಪದಲ್ಲಿ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಮುಖಂಡ , ಮಾಜಿ ಸಚಿವ ಶಿವಾನಂದ ನಾಯ್ಕ್ ಅವರ ಮನೆಗೆ ಭೇಟಿ ನೀಡಿರುವುದು ಎಲ್ಲರಲ್ಲೂ ಕುತೂಹಲ ಮುಡಿಸಿದೆ.