ಕಂಠಪೂರ್ತಿ ಸಾರಾಯಿ ಕುಡಿದು ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬಿದ್ದು ಹೊರಳಾಡುತ್ತಿದ್ದ ಗ್ರಾಮಕರಣಿಕ
ಕಡಬ- ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪ ಕಂಠಪೂರ್ತಿ ಕುಡಿದು ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬಿದ್ದು ಹೊರಳಾಡುತ್ತಿದ್ದ ಗ್ರಾಮಕರಣಿಕನೊಬ್ಬನನ್ನು ಬಸ್ ಚಾಲಕ ಸೀದಾ ಪೊಲೀಸ್ ಠಾಣೆಗೆ ಕರೆದು ತಂದು ಬಿಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಸಂಭವಿಸಿದೆ.
ಕಂಠಪೂರ್ತಿ ಕುಡಿದು ತೇಲಾಡುತ್ತಿದ್ದ ವ್ಯಕ್ತಿಯನ್ನು ಕಡಬ ತಾಲೂಕಿನ ಗೋಳಿತೊಟ್ಟುವಿನ ಗ್ರಾಮಕರಣಿಕ ನಾಗಸುಂದರ ಎಂದು ಗುರುತಿಸಲಾಗಿದೆ. ಈ ಹಿಂದೆಯು ಹಲವು ಬಾರಿ ಮದ್ಯಪಾನ ಮಾಡಿ ಸಿಕ್ಕಿ ಬಿದ್ದಿದ್ದು ನಾಗಸುಂದರನ ಮದ್ಯಪಾನದ ಚಟದ ಬಗ್ಗೆ ಮೇಲಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗೂ ದೂರು ನೀಡಲಾಗಿತ್ತು. ನಾಗಸುಂದರನ ಮೇಲೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದರು.
ಕರ್ತವ್ಯದ ವೇಳೆಯೇ ಮದ್ಯಪಾನದ ಚಟ ಹೊಂದಿರುವ ನಾಗಸುಂದರನನ್ನು ಬಸ್ಸು ಚಾಲಕ ಬಸ್ಸನ್ನು ನೇರವಾಗಿ ಪೊಲೀಸ್ ಠಾಣೆಗೆ ತಂದು ನಿಲ್ಲಿಸಿದ್ದಾರೆ.
ಇದರ ಬಗ್ಗೆ ಪೋಲಿಸ್ ಠಾಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.