ಹೊನ್ನಾವರ ತಾಲ್ಲೂಕಿನ ಮಂಕಿ ಸಾರಸ್ವತಕೇರಿ ಕ್ರಾಸ್ ಬಳಿ ಸ್ಕೂಟರ್ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ತಾಯಿ ಮಗಳು ಸ್ಥಳದಲ್ಲೆ ಸಾವು
ಮಂಕಿ: ಹೊನ್ನಾವರ ತಾಲ್ಲೂಕಿನ ಮಂಕಿ ಸಾರಸ್ವತಕೇರಿ ಕ್ರಾಸ್ ಬಳಿ ಸ್ಕೂಟರ್ ಒಂದಕ್ಕೆ ಹಿಂದಿನಿಂದ ಬಸ್ ಗುದ್ದಿದ ಪರಿಣಾಮ ಸ್ಕೂಟರ್ನಲ್ಲಿದ್ದ ತಾಯಿ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಮುರುಡೇಶ್ವರ ಮೂಲದ ಸವಿತಾ ಆಚಾರಿ ಮತ್ತು ಅಂಕಿತಾ ಆಚಾರಿ ಮೃತಪಟ್ಟ ದುರ್ದೈವಿಗಳಾಗಿದ್ದು, ಇವರು ಎಲೆಕ್ಟ್ರಿಕ್ ಸ್ಕೂಟಿಯಲ್ಲಿ ಬರುತ್ತಿರುವಾಗ ಹಿಂದಿನಿಂದ ಅತಿ ವೇಗವಾಗಿ ಬಂದ ಬಸ್, ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ಬಿದ್ದ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿದಾರೆ.
ಸ್ಥಳಕ್ಕೆ ಆಗಮಿಸಿದ ಮಂಕಿ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದು, ಐಆರ್ಬಿ ಕಂಪನಿಯ ಅವೈಜ್ಞಾನಿಕ ಕಾಮಗಾರಿಯಿಂದ ಇಂತಹ ಘಟನೆ ಪದೆ ಪದೆ ನಡೆಯುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.