ಮಾರ್ಚ್ 8 ರಂದು ಶಿವರಾತ್ರಿ ಪ್ರಯುಕ್ತ ಮುರುಡೇಶ್ವರ ದಲ್ಲಿ ಜಿಲ್ಲಾಡಳಿತ ನೇತೃತ್ವದ ಲ್ಲಿ ಶಿವರಾತ್ರಿ ಆಚರಣೆ ಮತ್ತು ಜಾಗರಣೆ ಬ್ರಹತ ಮಟ್ಟದ ಕಾರ್ಯಕ್ರಮ-ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್
ಭಟ್ಕಳ : ಮಾರ್ಚ 8 ರಂದು ಸಂಜೆ 6 ಗಂಟೆಯಿಂದ ಮುರುಡೇಶ್ವರ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆಯಿಂದ ನಡೆಸಲಾಗುವ ಸಾಂಸ್ಕೃತಿಕ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಪತ್ರಿಕಾಘೋಷ್ಟ್ರಿ ನಡೆಸಿದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್, ಮಹಾಶಿವರಾತ್ರಿ ನಿಮಿತ್ತ ರಾಜ್ಯಮಟ್ಟದ ಕಲಾವಿದರಿಂದ ಭಜನೆ, ನೃತ್ಯ, ಭರತ ನಾಟ್ಯ ಸೇರಿದಂತೆ ಗುಣಮಟ್ಟದ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಸಂಜೆ ೬ ಗಂಟೆಯಿಂದ ಬೆಳಿಗ್ಗೆವರೆಗೆ .ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಬೇಕಾಗಿದೆ. ಇದಕ್ಕೆ ಅಗತ್ಯ ಮುಂಜಾಗ್ರತಾ ಸಿದ್ಧತೆಗಳನ್ನು ಮಾಡಬೇಕಾಗಿದೆ. ಕಾರ್ಯಕ್ರಮವನ್ನು ಸಂಪೂರ್ಣ ಪ್ರಾಯೋಜಕರು ಹಾಗೂ ದಾನಿಗಳ ಸಹಾಯದಿಂದ ಮಾಡಲು ತೀರ್ಮಾನಿಸಲಾಗಿದೆ. ಅತ್ಯುತ್ತಮವಾಗಿ ಆಯೋಜನೆ ಮಾಡಿ ಜನರಿಂದ ಪ್ರತಿ ವರ್ಷ ಇಂತಹ ಕಾರ್ಯಕ್ರಮ ನಡೆಯಲಿ ಎನ್ನುವ ಮಟ್ಟಿಗೆ ಸಾರ್ವಜನಿಕರಿಂದ ಪ್ರಶಂಸೆ ಬರುವಂತಾಗಬೇಕು. ಜಿಲ್ಲೆಯಾದ್ಯಂತ ಈ ಕಾರ್ಯಕ್ರಮದ ಬಗ್ಗೆ ವ್ಯಾಪಕ ಪ್ರಚಾರ ಮಾಡುವಂತೆ ಪ್ರವಾಸೋದ್ಯಮ ಅಧಿಕಾರಿಗೆ ತಿಳಿಸಿದರು.
ಆಯಾ ಇಲಾಖೆಯ ಅಧಿಕಾರಿಗಳು ತಮಗೆ ನೀಡಿದ ಜವಾಬ್ದಾರಿಯನ್ನು ಚಾಚೂ ತಪ್ಪದೇ ನಿಭಾಯಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕಾರ ನೀಡಬೇಕಿದೆ. ಕಾರ್ಯಕ್ರಮದ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡು ಪ್ರವಾಸಿಗರು, ಸ್ಥಳೀಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಾರ್ಯಕ್ರಮಕ್ಕೆ ಆಗಮಿಸುವಂತೆ ಮಾಡಬೇಕು. ಪ್ರವಾಸೋದ್ಯಮ ಇಲಾಖೆಯು ಸ್ಥಳೀಯ ಪಂಚಾಯತ್ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಸಿದ್ಧತಾ ಕಾರ್ಯ ಆರಂಭಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಲೋಪದೋಷ ಉಂಟಾಗದಂತೆ ಗಮನ ಹರಿಸಬೇಕು. ಕುಡಿಯುವ ನೀರು, ಸ್ವಚ್ಛತೆ, ಭದ್ರತೆ ಸಮರ್ಪಕವಾಗಬೇಕು ಎಂದರು. ಕಾರ್ಯಕ್ರಮ ನಡೆಸಲು ಯಾವುದು ಸೂಕ್ತ ಸ್ಥಳ ಎನ್ನುವುದರ ಬಗ್ಗೆ ಮೊದಲು ನಿರ್ಧರಿಸಬೇಕು. ಎಲ್ಲರ ಸಹಕಾರದಿಂದ ಶಿವರಾತ್ರಿ ಪ್ರಯುಕ್ತ ಶಿವತಾಣದಲ್ಲಿ ವಿಜೃಂಭಣೆಯಿಂದ ಕಾರ್ಯಕ್ರಮ ಆಗಬೇಕು ಎಂದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಸಹಾಯಕ ಆಯುಕ್ತೆ ಡಾ. ನಯನಾ, ಭಟ್ಕಳ ಉಪವಿಭಾಗದ ಡಿ.ವೈ.ಎಸ್.ಪಿ. ಮಹೇಶ, ತಹಸೀಲ್ದಾರ ತಿಪ್ಪೇಸ್ವಾಮಿ, ತಾಪಂ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ವಿ.ಡಿ. ಮೊಗೇರ, ಮುರುಡೇಶ್ವರ ದೇವಸ್ಥಾನ ವ್ಯವಸ್ಥಾಪಕ ಮಂಜುನಾಥ ಶೆಟ್ಟಿ ,ಡಿ.ಎಫ್.ಓ ಗಿರೀಶ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.