ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬಿಟ್ಟಿದ್ದು ಬಿಜೆಪಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಮಂಕಾಳ ವೈದ್ಯ
ಬೆಂಗಳೂರು: ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಬ್ರೂಕ್ ಫೀಲ್ಡ್ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ನಡೆದ ಬಾಂಬ್ ಸ್ಫೋಟ ಬಿಜೆಪಿಯ ಚುನಾವಣಾ ಸಂಚು ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ ಸಚಿವ ಮಂಕಾಳು ವೈದ್ಯ
ಉತ್ತರಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಮೀನುಗಾರಿಕಾ ಸಚಿವ ಮಾಂಕಾಳು ವೈದ್ಯ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ʻʻಇದು ಚುನಾವಣೆಗಾಗಿ ಬಿಜೆಪಿಯವರು ಮಾಡಿರುವ ಸಂಚು. ಬಿಜೆಪಿಯವರು ಚುನಾವಣೆಗಾಗಿ ಏನ್ ಬೇಕಾದ್ರೂ ಮಾಡ್ತಾರೆ.. ಚುನಾವಣೆ ಹೊತ್ತಲ್ಲಿ ಮತದಾರರ ಗಮನ ಸೆಳೆಯಲು ಸಂಚು ಮಾಡಲಾಗಿದೆ. ಸಂಚನ್ನು ಯಾರು, ಯಾವ ಪಕ್ಷದವರು ಮಾಡ್ತಾರೆ ಅಂತಾ ಎಲ್ಲರಿಗೂ ಗೊತ್ತಿದೆ.. ಯಾರೂ ಭಯ ಪಡುವ ಅಗತ್ಯವಿಲ್ಲ.ʼʼ ಎಂದು ಮಾಂಕಾಳು ವೈದ್ಯ ಹೇಳಿದ್ದಾರೆ.
ʻʻಬಿಜೆಪಿಯವ್ರು ಇದುವರೆಗೂ ಯಾವ ಚುನಾವಣೆಯಲ್ಲಿ ಅಭಿವೃದ್ಧಿ ಪರವಾಗಿ ಮಾತನಾಡಿದ್ದಾರೆ..? ಬಿಜೆಪಿಯವ್ರು ಬಡವರ ಪರವಾಗಿ ಯಾವ ಕಾರ್ಯಕ್ರಮ ನೀಡಿ ಚುನಾವಣೆ ಎದುರಿಸಿದ್ದಾರೆ..? ಅವರು ಇದುವರೆಗೂ ಇಂತದ್ದೇ ಮಾಡಿಕೊಂಡು ಚುನಾವಣೆ ಎದುರಿಸಿದ್ದುʼʼ ಎಂದು ಮುಂಡಗೋಡಿನಲ್ಲಿ ಸಚಿವ ಮಂಕಾಳು ವೈದ್ಯ ಗಂಭೀರ ಆರೋಪ ಮಾಡಿದ್ದಾರೆ.
ಇದರ ಜತೆಗೆ ರಾಮೇಶ್ವರಂ ಕೆಫೆಯಲ್ಲಿ ಯಾರು ಬಾಂಬ್ ಸ್ಫೋಟ ಮಾಡಿದ್ದಾರೆಯೋ ಅವರ ವಿರುದ್ಧ, ಯಾರು ಇದರಲ್ಲಿ ಭಾಗಿಯಾಗಿದ್ದಾರೆಯೋ ಅವರ ವಿರುದ್ಧ ಖಂಡಿತವಾಗಿಯೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಂಕಾಳು ವೈದ್ಯ ಹೇಳಿದ್ದಾರೆ.