ಬೈಕ್ ಅಪಘಾತದಲ್ಲಿ ಮಹಿಳೆಯೊಬ್ಬರು ಸೇರಿದಂತೆ ಇಬ್ಬರು ಸಾವು
ಮಂಗಳೂರು-ದೇರಳಕಟ್ಟೆ ಸಮೀಪದ ನಾಟೆಕಲ್ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ವಿವಾಹಿತ ಮಹಿಳೆಯೊಬ್ಬರು ಸೇರಿದಂತೆ ಇಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಬೋಂದೇಲ್ ದೀಕ್ಷಿತ್ ಎಂಬವರ ಪತ್ನಿ ನಿಧಿ (29) ಹಾಗೂ ಬೈಕ್ ಸವಾರ ಯತೀಶ್ ದೇವಾಡಿಗ ಎಂದು ಗುರುತಿಸಲಾಗಿದೆ.
ಇಬ್ಬರು ಮುಡಿಪುವಿನಲ್ಲಿ ಜರುಗಿದ್ದ ಸಂಬಂಧಿಕರ ಗೃಹಪ್ರವೇಶದಲ್ಲಿ ಭಾಗವಹಿಸಿ ವಾಪಸ್ಸಾಗುವ ಸಂದರ್ಭ ಬೈಕ್ ಸವಾರನ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದಿದೆ. ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದರು. ನಿಧಿ ಹಾಗೂ ಯತೀಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.