ಕರಾವಳಿ ಭಾಗದಲ್ಲಿ ಶುಕ್ರವಾರ ರಾತ್ರಿ ಸುರಿದ ಅಬ್ಬರದ ಗಾಳಿ ಮಳೆ ಗೆ ಭಟ್ಕಳದಲ್ಲಿ ಮೀನುಗಾರಿಕೆಗೆ ತೆರಳಿದ್ದ ಓಂ ಗಣೇಶ್ ಹೆಸರಿನ ಬೋಟ್ ಮುಳುಗಡೆ
ಭಟ್ಕಳ: ಜಿಲ್ಲೆಯ ಕರಾವಳಿ ಭಾಗದಲ್ಲಿ ಅಬ್ಬರದ ಗಾಳಿ ಜೊತೆ ಗುಡುಗು ಸಹಿತ ಮಳೆ ಸುರಿಯುತಿದ್ದು ಭಟ್ಕಳದಲ್ಲಿ ಮೀನುಗಾರಿಕೆಗೆ ತೆರಳಿದ್ದ ಓಂ ಗಣೇಶ್ ಹೆಸರಿನ ಮಹಾದೇವ ಖಾರ್ವಿ ಎಂಬುವವರಿಗೆ ಸೇರಿದ ಬೋಟ್ ಮುಳುಗಡೆಯಾಗಿದೆ. ಬೋಟ್ನಲ್ಲಿದ್ದ ನಾಲ್ಕು ಜನ ಮೀನುಗಾರರನ್ನು ರಕ್ಷಿಸಲಾಗಿದ್ದು, ಬೋಟ್ ಮುಳುಗಡೆಯಿಂದ ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ.
ಇನ್ನುಳಿದ ಕರಾವಳಿ ಭಾಗಗಳಾದ ಕಾರವಾರ, ಅಂಕೋಲ, ಕುಮಟಾ, ಭಟ್ಕಳ ಭಾಗದಲ್ಲಿ ಗುಡುಗು ಸಹಿತ ಮಳೆ ಪ್ರಾರಂಭವಾಗಿದೆ.