ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿ ಬಳಿ ಗುಡ್ಡ ಕುಸಿತ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ
ಅಂಕೋಲಾ-ಕೇಂದ್ರ ಸರಕಾರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರು ಮತ್ತು ಮಾಜಿ ಮುಖ್ಯಮಂತ್ರಿ ಗಳಾದ ಶ್ರೀ H.D.ಕುಮಾರಸ್ವಾಮಿ ಅವರು ಇಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿ ಬಳಿ ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಮಳೆ, ನೆರೆ ಪರಿಸ್ಥಿತಿ, ಹಾನಿ ಇತ್ಯಾದಿಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ವಿಧಾನಸಭೆಯ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಶ್ರೀ ಸಿ.ಬಿ.ಸುರೇಶ್ ಬಾಬು, ಕುಮಟಾ ಜೆಡಿಸ್ ಮುಖಂಡ ಸೂರಜ್ ನಾಯ್ಕ್ ಸೋನಿ, ಮಾಜಿ ಸಚಿವ ಜೆಡಿಎಸ್ ಮುಖಂಡ ಆನಂದ್ ಅಸ್ನೋ ಟಿಕರ್ ಸೇರಿದಂತೆ ಹಲವರು ಜತೆಯಲ್ಲಿ ಇದ್ದರು.