ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಕಾಂಗ್ರೆಸ್ ಮುಖಂಡ ಶ್ರೀಧರ ನಾಯ್ಕ ಕೈಕಿಣಿ ಇಂದು ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಅರ್ಜಿ ಸಲ್ಲಿಕೆ
ಭಟ್ಕಳ- 2023 ರಲ್ಲಿ ನಡೆಯುವ ವಿಧಾನ ಸಭಾ ಚುನಾವಣೆಗೆ ಭಟ್ಕಳ – ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಳು ಟಿಕೆಟ್ ಬಯಸಿ ಇಂದು ಕೆಪಿ ಸಿಸಿ ಅಧ್ಯಕ್ಷ್ ರಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕರೂ, ಮಾಜಿ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಿರಿಯ ನಾಯಕರೂ ಮಾಜಿ ಮಂತ್ರಿಗಳಾದ ಸನ್ಮಾನ್ಯ ಶ್ರೀ ಆರ್ ವಿ ದೇಶಪಾಂಡೆ ಸರ್, ಇವರೆಲ್ಲರ ಆಶೀರ್ವಾದ ಪಡೆದು ಕೊಂಡು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎರಡು ಲಕ್ಷದ ಡಿಡಿ ಯೊಂದಿಗೆ ಭಟ್ಕಳದ ಕಾಂಗ್ರೆಸ್ ಮುಖಂಡರು , ಕೈಕಿಣಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀ ಶ್ರೀಧರ ನಾಯ್ಕ್ ಕೈಕಿಣಿ ಅರ್ಜಿಯನ್ನು ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಭಟ್ಕಳ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವನಾಥ್ ಶೆಟ್ಟಿ, ಕಾಂಗ್ರೆಸ್ ಮುಖಂಡ ಸಚಿನ್ ನಾಯ್ಕ ಬಸ್ತಿ, ಮುಂತಾದವರು ಉಪಸ್ಥಿತರಿದ್ದರು.