ಮಣಿಪಾಲ ಲಾಡ್ಜ್ ಒಂದರಲ್ಲಿ ಬಲವಂತದ ವೇಶ್ಯಾವಾಟಿಕೆ ದಂಧೆ-ಪೊಲೀಸರ ದಾಳಿ ಆರೋಪಿ ಪರಾರಿ
ಮಣಿಪಾಲ: ಲಾಡ್ಜ್ ಒಂದರಲ್ಲಿ ಬಲವಂತದ ವೇಶ್ಯಾವಾಟಿಕೆ ದಂಧೆ ಬಯಲಾಗಿದೆ.
80 ಬಡಗಬೆಟ್ಟು ಗ್ರಾಮದ ಖಾಸಗಿ ಲಾಡ್ಜ್ ಒಂದರಲ್ಲಿ ಬಲವಂತವಾಗಿ ಮಹಿಳೆಯನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಮಣಿಪಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಡಗಡಬೆಟ್ಟು ಗ್ರಾಮದ ಶಾಂತಿ ನಗರ ಸಮೃದ್ಧಿ ಬೋರ್ಡಿಂಗ್ ಎಂಡ್ ಲಾಡ್ಜಿಂಗ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದಾಳಿಯ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದು, ರೂಮ್ನಲ್ಲಿದ್ದ ಪಶ್ಚಿಮ ಬಂಗಾಲ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುವ ಸಂತ್ರಸ್ತ ಯುವತಿಯನ್ನು ರಕ್ಷಿಸಲಾಗಿದೆ. ಈಕೆಯಿಂದ ಕೃತ್ಯದ ಬಗ್ಗೆ ಮಾಹಿತಿ ಕಲೆ ಹಾಕಿದ್ದು, ಸಂತ್ರಸ್ತೆ ನೀಡಿರುವ ಮಾಹಿತಿಯಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.