ಮಂಗಳೂರು-ಭಾರತ್ ಮಾತಾ ಕಿ ಜೈ ಘೋಷಣೆ ಸಾಮರಸ್ಯವನ್ನು ಉತ್ತೇಜಿಸುತ್ತದೆಯೇ ಹೊರತು ವೈಷಮ್ಯ ಹರಡುವುದಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಮಂಗಳೂರಿನಲ್ಲಿ ಮಸೀದಿ ಮುಂದೆ ಪ್ರತಿಭಟನೆ ನಡೆಸಿ ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ ಸಂಬಂಧ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣದ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಜೂನ್ 9 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧಿಕಾರ ಸ್ವೀಕಾರ ಸಮಾರಂಭ ವೀಕ್ಷಣೆ ಬಳಿಕ ಅರ್ಜಿದಾರರು ಮನೆಗೆ ವಾಪಸ್ಸಾಗು ತ್ತಿದ್ದರು. ಈ ವೇಳೆ 25 ಜನರಿದ್ದ ಒಂದು ಗುಂಪು ಆರ್ಜಿದಾರರನ್ನು ತಡೆದು, ಏಕೆ ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗುತ್ತಿದ್ದೀರಾ ಆಕ್ಷೇಪ ವ್ಯಕ್ತಪಡಿಸಿದ್ದರು, ಈ ವೇಳೆ ಅರ್ಜಿದಾರರೊಬ್ಬರಿಗೆ ಚಾಕುವಿಂದ ಚುಚ್ಚಲಾಗಿತ್ತು.
ಆಧರೆ ಮರುದಿನ ಪಿ.ಕೆ.ಅಬ್ದುಲ್ಲಾ ಎಂಬಾತ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿ, ಮಸೀದಿ ಮುಂದೆ ಬಂದು ಬೆದರಿಕೆ ಹಾಕಿದರು’ ಎಂದು ಆರೋಪಿಸಿದ್ದಾರೆ. ಈ ದೂರನ್ನು ಆಧರಿಸಿ ಪೊಲೀಸರು ಅರ್ಜಿದಾರರ ವಿರುದ್ಧ ಎಫ್‌ಐಆರ್ ಮಾಡಿದ್ದರು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿದಾರರು ಈ ಮೊದಲೇ ದಾಖಲಿಸಿದ್ದ ಪ್ರಕರಣವೊಂದಕ್ಕೆ ಪ್ರತಿಯಾಗಿ ಈ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಐಪಿಸಿ ಕಲಂ 153ಎ ಅನ್ವಯವಾಗುವ ಒಂದೇ ಒಂದು ಅಂಶವೂ ಇಲ್ಲ. ಇದು ಕಾನೂನಿನ ದುರ್ಬಳಕೆಗೆ ಶ್ರೇಷ್ಠ ಉದಾಹರಣೆಯಾಗಿದೆ’ ಎಂದು ನ್ಯಾಯಪೀಠ ಹೇಳಿದೆ. ಅರ್ಜಿದಾರರು ಕೇವಲ ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ್ದಾರೆ ಹಾಗೂ ಪ್ರಧಾನ ಮಂತ್ರಿಯನ್ನು ಹೊಗಳಿದ್ದಾರೆ.
ದ್ವೇಷ ಹರಡಿದ ಅಂಶವು ದೂರಿನಲ್ಲಿಯೇ ಉಲ್ಲೇಖಿಸಿಲ್ಲ. ವಾಸ್ತವ ಅಂಶ ಪರಿಗಣಿಸಿದರೆ ‘ಭಾರತ್ ಮಾತಾ ಕಿ ಜೈ’ ಸೇರಿದಂತೆ ವಿವಿಧ ಅಂಶಗಳನ್ನು ಮುಂದಿಟ್ಟುಕೊಂಡು ಬೇರೆ ಬೇರೆ ಗುಂಪುಗಳ ನಡುವೆ ದ್ವೇಷ ಭಾವನೆ ಮೂಡಿಸುವ ಘಟನೆ ನಡೆದಿರಬೇಕಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಅಂತಹ ಘಟನೆ ನಡೆದಿಲ್ಲ. ಐಪಿಸಿ ಸೆಕ್ಷನ್ 153 ದುರ್ಬಳಕೆಗೆ ಈ ಪ್ರಕರಣ ಸಾಮರಸ್ಯ ಉತ್ತೇಜಿಸುತ್ತದೆಯೇ ಹೊರತು ದ್ವೇಷವನ್ನಲ್ಲ, ಹಾಗಾಗಿ, ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸಲಾ ಗುತ್ತಿದೆ ಎಂದು ಆದೇಶದಲ್ಲಿ ನ್ಯಾಯಪೀಠ ತಿಳಿಸಿದೆ. ಅರ್ಜಿದಾರರ ಪರ ಹೈಕೋರ್ಟ್ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್ ವಾದ ಮಂಡಿಸಿದ್ದರು.