ಕೊಡಗು : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಎಂಬಲ್ಲಿ ಪೊಲೀಸ್ ಪೇದೆಯೋರ್ವ ಕೊಲೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.ಕೊಲೆ ಮಾಡಲು ಯತ್ನಿಸಿದ್ದ ಪೊಲೀಸ್ ಪೇದೆ ಕೊಟ್ರೇಶ್ (30) ಮತ್ತು ಕೊಲೆಗೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕೊಟ್ರೇಶ್ ಪ್ರಿಯತಮೆ ಆಯಿಷಾಳನ್ನು (29) ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕೊಟ್ರೇಶ್ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿದ್ದಾರೆ.ಪೊಲೀಸ್ ಕಾನ್ಸ್ಟೇಬಲ್ ಕೊಟ್ರೇಶ್ ಪ್ರೇಯಸಿ ಆಯಿಷಾಳ ಪಕ್ಕದ ಮನೆಯಲ್ಲಿ ವಾಸವಾಗಿದ್ದನು. ಆಯಿಷಾ ಕೊಟ್ರೇಶ್ನನ್ನು ಮಧ್ಯರಾತ್ರಿ ಮನೆಗೆ ಕರೆಸಿದ್ದಾಳೆ. ಬಳಿಕ, ಕೊಟ್ರೇಶ್ ದಿಂಬಿನಿಂದ ಉಸಿರುಗಟ್ಟಿಸಿ ಆಯಿಷಾ ಪತಿ ಇಫ್ರಾಜ್ರನ್ನು ಕೊಲೆ ಮಾಡಲು ಯತ್ನಿಸಿದ್ದಾನೆ.ಅದ್ಹೇಗೊ ಇಫ್ರಾಜ್ರನ್ನು ಬಚಾವ್ ಆಗಿದ್ದಾರೆ. ನಂತರ, ಆಯಿಷಾ ಮತ್ತು ಕಟ್ರೋಶ್ ನಡುವಿನ ಅಕ್ರಮ ಸಂಬಂಧ ಬಯಲಾಗಿದೆ.
ಆರೋಪಿ ಕೋಟ್ರೆಶ್ ವಿರುದ್ಧ ದೂರು ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕಿದ್ದಾರೆ. ನಂತರ, ಇಫ್ರಾಜ್ ಕೊಡಗು ಎಸ್ಪಿ ರಾಮರಾಜನ್ ಅವರಿಗೆ ದೂರು ನೀಡಿದ್ದಾರೆ. ಎಸ್ಪಿ ಸೂಚನೆ ಮೇರೆಗೆ ಎಫ್ಐಆರ್ ದಾಖಲಾಗಿದ್ದು, ಸದಯ ಆರೋಪಿ ಕೊಟ್ರೇಶ್ನನ್ನು ಅರೆಸ್ಟ್ ಮಾಡಲಾಗಿದೆ.