ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಹಾಗೂ ನೂರಾರು ಶವ ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿಗಳ ನೇತೃತ್ವದ ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ನೇತೃತ್ವದ ಎಸ್‌ಐಟಿ ತಂಡದಲ್ಲಿ ಐಪಿಎಸ್ ಅಧಿಕಾರಿ ಅನುಚೇತ್, ಜಿತೇಂದ್ರ ಕುಮಾರ್, ಸೌಮ್ಯಲತಾ ಇರಲಿದ್ದಾರೆ.ಶೀಘ್ರದಲ್ಲಿ ಎಸ್‌ಐಟಿ ತಂಡದಿಂದ ತನಿಖೆ ಆರಂಭವಾಗಲಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಮಾಹಿತಿ ನೋಡಿರುವ ದ.ಕ ಜಿಲ್ಲಾ ಎಸ್.ಪಿ ಡಾ. ಅರುಣ್ ಕೆ., ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ರಾಜ್ಯ ಸರ್ಕಾರವು ಅದೇಶಿಸಿರುತ್ತದೆ. ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.