ಭಟ್ಕಳ ತಾಲೂಕಿನ ಬೇಂಗ್ರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಶಸ್ವಿಯಾಗಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ
ಭಟ್ಕಳ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಭಟ್ಕಳ ತಾಲೂಕಿನ ಬೇಂಗ್ರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಪ ವಿಭಾಗಾಧಿಕಾರಿ ಮಮತಾದೇವಿ ಜಿ.ಎಸ್. ಅವರು ಉದ್ಘಾಟಿಸಿದರು.
ಭಟ್ಕಳ ತಹಸೀಲ್ದಾರ್ ಡಾ. ಸುಮಂತ್ ಬಿ.ಇ. ಅವರು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ರೂಪರೇಷೆಗಳನ್ನು ತಿಳಿಸಿದರು.
ಕಾರ್ಮಿಕ ಇಲಾಖೆಯ ಸಿಬ್ಬಂದಿಯ ಮೇಲೆ ಸಹಾಯಕ ಆಯುಕ್ತರು ಸಿಟ್ಟಾದ ಘಟನೆ ನಡೆಯಿತು. ಕಾರ್ಮಿಕ ಇಲಾಖೆಯುವರು ಗ್ರಾಮ ಓನ್ ಕೇಂದ್ರದಿAದ ಹಾಕಿರುವ ಅರ್ಜಿಗಳನ್ನು ಸ್ವೀಕರಿಸುತ್ತಿಲ್ಲ ಎನ್ನುವ ದೂರು ಬರುತ್ತಿದೆ. ಬೇರೆ ಬೇರೆ ಕೇಂದ್ರಗಳಿAದ ಬಂದರೆ ಮಾತ್ರ ಸ್ವೀಕರಿಸುತ್ತೀರಿ ಇದೇನು ತಾರತಮ್ಯ. ಹೀಗೆ ಮಾಡಿದರೆ ನೋಟೀಸು ನೀಡಬೇಕಾಗುತ್ತದೆ ಎಂದೂ ಹೇಳಿದರು. ಮಹಿಳೆಯೋರ್ವರು ಗ್ರಾಮ ಓನ್‌ನಿಂದ ತಮ್ಮ ಮಕ್ಕಳ ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸಿದ್ದನ್ನು ತಿರಸ್ಕರಿಸಿರುವ ಕುರಿತು ಅರ್ಜಿ ಸಲ್ಲಿಸಿದ್ದನ್ನು ಅನುಸರಿಸಿ, ಕಾರ್ಮಿಕ ಇಲಾಖೆಯ ಸಿಬ್ಬಂದಿಯನ್ನು ಕರೆದು ಪರಿಶೀಲಿಸಲು ತಿಳಿಸಿದರು.
ತನಗೆ ಮಾಸಿಕ ಪಿಂಚಣಿ ಹಣ ನೀಡಿ ಎಂದು ವೃದ್ಧರೋರ್ವರು ಅರ್ಜಿ ಸಲ್ಲಿಸಿದಾಗ ಪರಿಶೀಲನೆ ನಡೆಸಿದ ಸಹಾಯಕ ಆಯುಕ್ತರು ವೃದ್ಧರಿಗೆ ಇನ್ನೂ 65 ವರ್ಷ ಪೂರ್ಣವಾಗದ ಕಾರಣ ವೃದ್ಧಾಪ್ಯ ವೇತನ ನೀಡಲು ಸಾಧ್ಯವಾಗುವುದಿಲ್ಲ, ಪಿಂಚಣಿಯನ್ನು ಮಂಜೂರು ಮಾಡುವಂತೆ ಶಿಫಾರಸು ಮಾಡಿದರು. ನಂತರ ಮಲ್ಲಾರಿ ಶಾಲೆಗೆ ಭೇಟಿ ನೀಡಿ ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿರುವುದನ್ನು ಕಂಡ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಕ್ಷಣ ಶಾಲಾ ಕಟ್ಟಡವನ್ನು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳುವಂತೆ ಹಾಗೂ ನೆರೆಪರಿಹಾರ ನಿಧಿಯಿಂದ ಹಣ ನೀಡುವುದಾಗಿ ಭರವಸೆಯನ್ನು ನೀಡಿದರು. ನಂತರ ಕೋಗ್ತಿ ಸರಕಾರಿ ಶಾಲೆಗೂ ಭೇಟಿ ನೀಡಿ ಪರಿಶೀಲಿಸಿದರು.
ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಗ್ರಾಮದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಇಬ್ಬರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಉತ್ತಮ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಯೋಗಾಸನದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿ ಅಶ್ವಿನ್ ದೇವಡಿಗ ಹಾಗೂ 400 ಮೀಟರ್ ಓಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ರಶ್ಮಿಕಾ ಗಣಪತಿ ದೇವಾಡಿಗ ಅವರನ್ನು ಕೂಡಾ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬೇಂಗ್ರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ದೇವಿ ಮಾರುತಿ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮಗೇರ, ಕೃಷಿ ಅಧಿಕಾರಿ ಎ.ಬಿ. ಇಟ್ನಾಳ್, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಒಟ್ಟೂ 135 ಅರ್ಜಿಗಳು ವಿವಿಧ ಸಮಸ್ಯೆಗಳಿಗೆ ಸಂಭAಧ ಪಟ್ಟಂತೆ ಸಲ್ಲಿಕೆಯಾಗಿದ್ದು ಸ್ಥಳಲ್ಲಿಯೇ 28 ಅರ್ಜಿಗಳನ್ನು ವಿಲೇವಾರಿ ಮಾಡಲಾಯಿತು ಉಳಿದ ಅರ್ಜಿಗಳನ್ನು ಸಂಬAಧ ಪಟ್ಟ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದ್ದು ಸೂಕ್ತ ಕ್ರಮ ವಹಿಸುವಂತೆ ಸೂಚಿಸಲಾಗಿದೆ.