2 ಕೋಟಿ ರೂಪಾಯಿ ಲಂಚದ ಹಣದೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಕಾರ್ಯನಿರ್ವಾಹಕ ಇಂಜಿನಿಯರ್
ಪಾಟ್ನಾ-ಬಿಹಾರದ ಪಾಟ್ನಾದಲ್ಲಿ ಆರ್ಥಿಕ ಅಪರಾಧಗಳ ವಿಭಾಗದ ಅಧಿಕಾರಿಗಳು, ಕಾರ್ಯನಿರ್ವಾಹಕ ಇಂಜಿನಿಯರ್ ಫ್ಲಾಟ್ ಮೇಲೆ ದಾಳಿ ನಡೆಸಿ ಕೋಟಿ ರೂಪಾಯಿ ಅಕ್ರಮ ನಗದು ಹಣವನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಸಂಜಿತ್ ಕುಮಾರ್ ಎಂಬುವರ ಫ್ಲಾಟ್ ಮತ್ತು ಇತರೆ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ಕೇಂದ್ರದ ಕಟ್ಟಡ ನಿರ್ಮಾಣ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಸುಳ್ಳು ಗುತ್ತಿಗೆದಾರರಿಂದ 2 ಲಕ್ಷ ಲಂಚ ಸ್ವೀಕರಿಸುವ ವೇಳೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಂಜಿತ್ ಗುತ್ತಿಗೆದಾರರಿಂದ 6 ಲಕ್ಷ ರೂಪಾಯಿ ಲಂಚ ಕೇಳಿದ್ದರು. ಆದರೆ 2 ಲಕ್ಷಕ್ಕೆ ಇತ್ಯರ್ಥಪಡಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಫ್ಲಾಟ್ ನಲ್ಲಿ ಒಂದು ಕೋಣೆಗೆ ಬೀಗ ಜಡಿಯಲಾಗಿತ್ತು. ಅನುಮಾನಗೊಂಡ ಅಧಿಕಾರಿಗಳು ಕೋಣೆ ತೆರೆದಾಗ 2 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಅಲ್ಲದೇ ಅಧಿಕಾರಿಗಳು 500 ಮತ್ತು 2000 ರೂಪಾಯಿ ಮುಖಬೆಲೆಯ ನಗದನ್ನು ಹೊಂದಿದ್ದ ಎರಡು ಬ್ಯಾಗ್ಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಹಲವೆಡೆ ದಾಳಿ ನಡೆಸಿದ್ದು, 20 ಲಕ್ಷ ರೂಪಾಯಿ ಅಕ್ರಮ ನಗದು ಪತ್ತೆಯಾಗಿದೆ ಎಂದು ವರದಿಯಿಂದ ತಿಳಿದುಬಂದಿದೆ.