16 ವರ್ಷದ ಬಾಲಕಿಯ ಮೇಲೆ 8 ಕಾಮುಕರು ಸೇರಿ ಸತತ 12 ಗಂಟೆಗಳ ಕಾಲ ಗ್ಯಾಂಗ್ ರೇಪ್
ಮುಂಬೈ-ಬಾಲಕಿಯ ಮೇಲೆ 8 ಕಾಮುಕರು ಸೇರಿ ಸತತ 12 ಗಂಟೆಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ನಡೆದಿದೆ.
16 ವರ್ಷದ ಬಾಲಕಿಗೆ ವ್ಯಕ್ತಿಯೊಬ್ಬ ಆಮಿಷವೊಡ್ಡಿ ಖಾಲಿ ಬಂಗಲೆಗೆ ಕರೆದೊಯ್ದಿದ್ದಾನೆ. ಅಲ್ಲಿ ಆಕೆಯ ಮೇಲೆ ಮಾರನೇ ದಿನದ ಬೆಳಗ್ಗಿನವರೆಗೂ ಅತ್ಯಾಚಾರ ಎಸಗಿದ್ದಾರೆ. ಆಕೆಯನ್ನು ಸಮುದ್ರ ತೀರಕ್ಕೆ ಕರೆದೊಯ್ದು ಅಲ್ಲೂ ಅತ್ಯಾಚಾರವೆಸಗಿದ್ದಾರೆ. ಅದಾದ ಬಳಿಕ ಪೊದೆಗಳಲ್ಲಿ ಆಕೆಯ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಘಟನೆಗೆ ಸಂಬಂಧಿಸಿ ಬಾಲಕಿಯು ಪೊಲೀಸರಿಗೆ ದೂರು ನೀಡಿದ್ದು, ದೂರಿನಲ್ಲಿ ಡಿ. 16 ರಂದು ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 11 ಗಂಟೆಯವರೆಗೂ ಅತ್ಯಾಚಾರವೆಸಗಿರುವ ಬಗ್ಗೆ ಬಾಲಕಿ ತಿಳಿಸಿದ್ದಾಳೆ.