ಭಟ್ಕಳ- ಪಾಕಿಸ್ತಾನದಿಂದ ಅಕ್ರಮವಾಗಿ ಬಂದು ಭಟ್ಕಳದಲ್ಲಿ ನೆಲಸಿದ್ದ ಪಾಕ್ ಮಹಿಳೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಖತೀಜಾ ಮೆಹರೀನ್ ಗೆ ಧಾರವಾಡ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣ ವಿಚಾರವಾಗಿ ಧಾರವಾಡ ಪೀಠದಲ್ಲಿ ವಿಚಾರಣೆ ಮಾಡಲಾಗಿದ್ದು, 1 ಲಕ್ಷ ಮೌಲ್ಯದ ಬಾಂಡ್ ಸಲ್ಲಿಸಬೇಕು, ಸಾಕ್ಷಿ ನಾಶಕ್ಕೆ ಯತ್ನಿಸಬಾರದು.
ಪೂರ್ವಾನುಮತಿ ಇಲ್ಲದೇ ಬೇರೆ ಸ್ಥಳಕ್ಕೆ ಹೋಗಬಾರದು. ಹೀಗೆ ಹಲವು ಷರತ್ತು ವಿಧಿಸಿ ಪಾಕಿಸ್ತಾನ ಮಹಿಳೆಗೆ ಜಾಮೀನು ಮಂಜೂರು ಮಾಡಲಾಗಿದೆ.