ಮಾದಕ ದ್ರವ್ಯ ನೀಡಿ ಯುವಕನ ಮೇಲೆ ಅತ್ಯಾಚಾರ ಮಾಡಿದ ನಾಲ್ವರು ಯುವತಿಯರು
ಪಂಜಾಬ್ – ಅರಣ್ಯ ಪ್ರದೇಶದಲ್ಲಿ ನಾಲ್ವರು ಯುವತಿಯರು ಮಾದಕ ದ್ರವ್ಯ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಪಂಜಾಬ್ನ ಜಲಂಧರ್ ನಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಕಪುರ್ತಲಾ ರಸ್ತೆಯ ಬಳಿ ಮನೆಗೆ ತೆರಳುತ್ತಿದ್ದ ನನ್ನನ್ನು ಯುವತಿಯರು ವಿಳಾಸ ಕೇಳಿದರು. ನಾನು ಹೇಳುತ್ತಿದ್ದ ವೇಳೆ ಕಣ್ಣಿಗೆ ಏನನ್ನೋ ಎರಚಿದರು. ನಾನು ಪ್ರಜ್ಞಾಹೀನನಾದ ಬಳಿಕ ತಮ್ಮ ಕಾರಿನಲ್ಲಿ ಹಾಕಿಕೊಂಡು ಅಜ್ಞಾತ ಸ್ಥಳಕ್ಕೆ ಕರೆದೊಯ್ದರು. ಬಳಿಕ ನನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದರು ಎಂದು ಸಂತ್ರಸ್ತ ವ್ಯಕ್ತಿ ಹೇಳಿಕೊಂಡಿದ್ದಾನೆ.
ಕುಡಿದ ಮತ್ತಿನಲ್ಲಿದ್ದ ನಾಲ್ವರು ಯುವತಿಯರು ಒಬ್ಬರ ಮೇಲೊಬ್ಬರಂತೆ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ನನಗೂ ಸಹ ಬಲವಂತದಿಂದ ಮದ್ಯ ಕುಡಿಸಿ ಹಲ್ಲೆ ನಡೆಸಿದ್ದಾರೆ. ಲೈಂಗಿಕ ದೌರ್ಜನ್ಯದ ಬಳಿಕ ನನ್ನನ್ನು ನಗರದ ಯಾವುದೋ ಸ್ಥಳದಲ್ಲಿ ಬಿಟ್ಟು ಯುವತಿಯರು ಪರಾರಿಯಾಗಿದ್ದಾರೆ. ನನಗೆ ನ್ಯಾಯ ಕೊಡಿಸಿ ಎಂದು ವ್ಯಕ್ತಿ ಪೊಲೀಸರ ಬಳಿ ಮನವಿ ಮಾಡಿಕೊಂಡಿದ್ದಾನೆ.
ಈ ಘಟನೆ ತಿಳಿಯುತ್ತಿದ್ದಂತೆಯೇ ಪಂಜಾಬ್ ಪೊಲೀಸ್ ಗುಪ್ತಚರ ಇಲಾಖೆ ಈ ಬಗ್ಗೆ ಸ್ವಯಂಪ್ರೇರಿತ ತನಿಖೆ ಪ್ರಾರಂಭಿಸಿದ್ದಾರೆ. ಆದರೆ ಈ ಬಗ್ಗೆ ಯಾವುದೇ ವ್ಯಕ್ತಿ ರೀತಿ ದೂರು ನೀಡಿಲ್ಲ. ತನ್ನ ಮೇಲೆ ನಡೆದಿರುವ ಅತ್ಯಾಚಾರ ದೌರ್ಜನ್ಯದ ಬಗ್ಗೆ ಆತ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾನೆ ಎಂದು ವರದಿಯಾಗಿದೆ.