ನಡು ರಸ್ತೆಯಲ್ಲಿ ಗುಂಡಿಕ್ಕಿ ಮಹಿಳೆ ಕೊಲೆ ಮಾಡಿದ ದುಷ್ಕರ್ಮಿಗಳು
ನವದೆಹಲಿ- ಸೋಮವಾರ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿವಾಹಿತ ಮಹಿಳೆ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ದೆಹಲಿಯ ಪಶ್ಚಿಮ ವಿಹಾರದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಜ್ಯೋತಿ ಎಂದು ಗುರುತಿಸಲಾಗಿದೆ.ಜ್ಯೋತಿ ಅವರು ಫ್ಲಿಪ್‌ಕಾರ್ಟ್‌ನ ಕೊರಿಯರ್ ಇಲಾಖೆಯಲ್ಲಿ ಕೆಲಸ ಮಾತ್ತಿದ್ದು, ಸೋಮವಾರ ಸಂಜೆ 7:30 ರ ವೇಳೆ ಕೆಲಸ ಮುಗಿಸಿ ಸ್ಕೂಟರ್ ನಲ್ಲಿ ಮನೆಗೆ ಬರುತ್ತಿದ್ದ ವೇಳೆ ಬೈಕ್ ಹಾಗೂ ಸ್ಕೂಟಿಯಲ್ಲಿ ಬಂದ ದುಷ್ಕರ್ಮಿಗಳು ಜ್ಯೋತಿ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ.
ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ.ಮೃತರು ಪತಿ ಹಾಗೂ ಮೂವರು ಮಕ್ಕಳನ್ನು ಮೃತರು ಅಗಲಿದ್ದು, ಸಿಸಿಟಿವಿ ದೃಶ್ಯಗಳನ್ನು ನೋಡಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.